ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ ಸಂಚಾರದಲ್ಲಿ ವ್ಯತ್ಯಯವಿಲ್ಲ: ಮುಷ್ಕರ ಗೊಂದಲಕ್ಕೆ ಅಧಿಕಾರಿಗಳ ಸ್ಪಷ್ಟನೆ

|

Updated on: Dec 10, 2020 | 11:06 PM

ಕೆಎಸ್​ಆರ್​ಟಿಸಿ ಬಸ್​ ಸಂಚಾರ ಎಂದಿನಂತೆ ಇರುತ್ತದೆ. ಬಿಎಂಟಿಸಿ ಸಂಚಾರದಲ್ಲಿಯೂ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಎರಡೂ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ‘ಟಿವಿ9‘ಗೆ ಮಾಹಿತಿ ನೀಡಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ ಸಂಚಾರದಲ್ಲಿ ವ್ಯತ್ಯಯವಿಲ್ಲ: ಮುಷ್ಕರ ಗೊಂದಲಕ್ಕೆ ಅಧಿಕಾರಿಗಳ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ನಗರ ಸೇರಿದಂತೆ ರಾಜ್ಯದೆಲ್ಲೆಡೆ ಶುಕ್ರವಾರ (ಡಿ.11) ಕೆಎಸ್​ಆರ್​ಟಿಸಿ ಬಸ್​ ಸಂಚಾರ ಎಂದಿನಂತೆ ಇರುತ್ತದೆ. ಬಿಎಂಟಿಸಿ ಸಂಚಾರದಲ್ಲಿಯೂ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಎರಡೂ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ನಮ್ಮ ಕೆಎಸ್​ಆರ್​ಟಿಸಿ ಸಿಬ್ಬಂದಿ ಮುಷ್ಕರದ ಹೇಳಿಕೆ ಕೊಟ್ಟಿಲ್ಲ. ಸಾರಿಗೆ ವ್ಯವಸ್ಥೆಗೆ ತೊಂದರೆಯಾಗದಂತೆ ಸಹಕರಿಸುತ್ತೇವೆ ಎಂದು ಹೇಳಿದ್ದಾರೆ. ಕೋವಿಡ್-19ರ ಸಂಕಷ್ಟ ಸಮಯದಲ್ಲಿ ನಮ್ಮಿಂದ ಜನರಿಗೆ ತೊಂದರೆಯಾಗುವುದು ಬೇಡ ಎಂದು ನಮ್ಮ ಸಚಿವರು ಈಗಾಗಲೇ ನೌಕರರಿಗೆ ಮನವಿ ಮಾಡಿದ್ದಾರೆ, ನಾನೂ ಮನವಿ ಮಾಡುತ್ತೇನೆ ಎಂದು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಹೇಳಿದರು.

ಸಂಸ್ಥೆಯ ಸಿಬ್ಬಂದಿ ನಿನ್ನೆ (ಡಿ.10) ಶಾಂತಿಯುತವಾಗಿ ಪ್ರತಿಭಟನೆ ಮಾಡಿರುವುದು ಸಚಿವರ ಗಮನಕ್ಕೆ ಬಂದಿದೆ. ಇದನ್ನು ಅವರು ಬೆಳೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ನಾಳೆ ವೈಯಕ್ತಿಕ ರಜೆ ಹಾಕಿಕೊಂಡು ಹೋಗುವವರು ಹೋಗಬಹುದು. ಉಳಿದವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಜನರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಬಿಎಂಟಿಸಿ ಸಂಚಾರಕ್ಕೆ ಧಕ್ಕೆಯಿಲ್ಲ
ಬಿಎಂಟಿಸಿ ಸಂಚಾರ ಇಂದು ಎಂದಿನಂತೆ ಇರುತ್ತದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆ ಮಾಡ್ತೀವಿ
ಬಿಎಂಟಿಸಿ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಎಂಟಿಸಿ ನೌಕರರ ಒಕ್ಕೂಟದ ಮುಖ್ಯಸ್ಥ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ. ಎಐಟಿಯುಸಿ ಹೊರತುಪಡಿಸಿ ಉಳಿದ ನೌಕರ ಸಂಘಗಳು ಕೈಜೋಡಿಸಿವೆ ಎಂದು ಅವರು ಹೇಳಿದ್ದಾರೆ.

ಸಾರಿಗೆ ಸಚಿವರು ಈವರೆಗೆ ನಮ್ಮ ಅಳಲು ಆಲಿಸಿಲ್ಲ. ಉತ್ತರ ನೀಡಿಲ್ಲ. ಸಂಸ್ಥೆಗೆ ಅವಮಾನ ಮಾಡುವ ಉದ್ದೇಶ ನಮಗಿಲ್ಲ. ನಮ್ಮ ವಿರುದ್ಧ ಎಸ್ಮಾ (ಅಗತ್ಯ ಸೇವಾ ನಿಯಮ) ಪ್ರಯೋಗಿಸುವ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಸತ್ತಿರುವ ನಮ್ಮನ್ನು ಇನ್ನೇನು ಮಾಡಲು ಸಾಧ್ಯ ಎಂದು ವಿಷಾದಿಸಿದರು.

ನಾಳೆಯಿಂದ ಕೆಎಸ್​ಆರ್​ಟಿಸಿ-ಬಿಎಂಟಿಸಿ ಸಂಚಾರ ಸಂಪೂರ್ಣ ನಿಲ್ಲಬೇಕು: ಕೋಡಿಹಳ್ಳಿ ಚಂದ್ರಶೇಖರ್

 

Published On - 11:04 pm, Thu, 10 December 20