KSRTC, BMTC Employees Strike: ಆಗಸ್ಟ್ 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಸಾರಿಗೆ ನೌಕರರ ಮುಷ್ಕರ: ಸರ್ಕಾರದ ವಿರುದ್ದ ಸಮರಕ್ಕೆ ಸಾರಿಗೆ ನೌಕರರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಆಗಸ್ಟ್ 5 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಮಾಡಿದ್ದಾರೆ. ಈ ಸಂಬಂಧ ಬುಧವಾರ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸಾರಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

KSRTC, BMTC Employees Strike: ಆಗಸ್ಟ್ 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: Jul 31, 2025 | 7:33 AM

ಬೆಂಗಳೂರು, ಜುಲೈ 31: ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು (KSRTC, BMTC Employees) ಅನಿರ್ದಿಷ್ಟಾವಧಿ ಮುಷ್ಕರ (Indefinite Strike) ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೇನು?

ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಬಹುತೇಕ ಪಕ್ಕಾ ಆಗಿದೆ.

ಎಸ್ಮಾ, ವಜಾಕ್ಕೆ ಹೆದರಲ್ಲವೆಂದ ಸಾರಿಗೆ ನೌಕರರು

ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್​ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ
ಆಗಸ್ಟ್​ 5ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
3 ಸಾವಿರ ಕೋಟಿ ಪಿಎಫ್ ಬಾಕಿ ಉಳಿಸಿಕೊಂಡ ಸಾರಿಗೆ ನಿಗಮಗಳು: ನೌಕರರಿಗೆ ಸಂಕಷ್ಟ
ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಫ್ರೀಡಂ ಪಾರ್ಕ್​ನಲ್ಲಿ ಸಾರಿಗೆ ನೌಕರರ ಸಾಮೂಹಿಕ ಉಪವಾಸ ಸತ್ಯಾಗ್ರಹ

ಸಾರಿಗೆ ಮುಷ್ಕರದ ಬಗ್ಗೆ ಮಾತಾನಾಡಿದ ಮಹಿಳಾ ಪ್ರಯಾಣಿಕರು, ಬಿಎಂಟಿಸಿ ಬಸ್ ಇಲ್ಲ ಎಂಬುದನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಬಸ್ ಮುಷ್ಕರ ಮಾಡಿದರೆ ತುಂಬಾ ಕಷ್ಟ ಆಗುತ್ತದೆ. ಪ್ರತಿದಿನ ಕಚೇರಿಗೆ ಆಟೋ, ಕ್ಯಾಬ್​ನಲ್ಲಿ ದುಡ್ಡು ಕೊಟ್ಟು ಪ್ರಯಾಣ ಮಾಡಲು ಕಷ್ಟ ಎಂದಿದ್ದಾರೆ.

ಇದನ್ನೂ ಓದಿ: ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆಎಸ್​ಆರ್​ಟಿಸಿ

ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ‌ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ