Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಇಲ್ಲಿದೆ ಅಂಕಿ -ಅಂಶ

ಕರ್ನಾಟಕದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಸಾರಿಗೆ ನಿಗಮಗಳಿಗೆ ಕಳೆದ ಐದು ವರ್ಷಗಳಲ್ಲಿ ಭಾರಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯ ಖರ್ಚು ಮತ್ತು ನಿಗಮಗಳ ಆರ್ಥಿಕ ಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಬಸ್‌ಗಳ ಸಂಖ್ಯೆ ಹೆಚ್ಚಳ, ಉದ್ಯೋಗಿಗಳ ನೇಮಕಾತಿ ಮತ್ತು ಆರೋಗ್ಯ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಇಲ್ಲಿದೆ ಅಂಕಿ -ಅಂಶ
ಕರ್ನಾಟಕ ಸಾರಿಗೆ ಬಸ್​ಗಳು
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Mar 12, 2025 | 12:35 PM

ಬೆಂಗಳೂರು, ಮಾರ್ಚ್​ 12: ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ (BMTC), ಕೆಕೆಆರ್​ಟಿಸಿ (KKRTC) ಮತ್ತು ಎನ್​ಡಬ್ಲೂಕೆಆರ್​ಸಿ (NWKRTC) ನಾಲ್ಕೂ ನಿಗಮಗಳು ಕರ್ನಾಟಕದ ಜನರ ಜೀವನಾಡಿಯಾಗಿವೆ. ನಾಲ್ಕೂ ನಿಗಮಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣ ಮಾಡುತ್ತಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಿಗೆ ಹರಿದು ಬರುತ್ತಿರುವ ಆದಾಯವೆಷ್ಟು? ನಿಗಮಗಳು ಲಾಭದಲ್ಲಿಯವೆಯೇ ಅಥವಾ ನಷ್ಟದಲ್ಲಿವೆಯಾ? ಎಂಬ ಪ್ರಶ್ನೆಗಳು ಜನರಲ್ಲಿವೆ. ಇದೇ ಪ್ರಶ್ನೆಗಳನ್ನು ವಿಧಾನ ಪರಿಷತ್​​ನಲ್ಲಿ ಎಂಎಲ್​ಸಿ ಕೇಶವ ಪ್ರಸಾದ್ ಕೇಳಿದ್ದಾರೆ.

ಎಂಎಲ್​ಸಿ ಕೇಶವ ಪ್ರಸಾದ್ ಪ್ರಶ್ನೆಗೆ, “ಕಳೆದ 5 ವರ್ಷಗಳಲ್ಲಿ ಕೆಎಸ್​ಆರ್​ಟಿಸಿಗೆ 1500 ಕೋಟಿ ರೂ., ಬಿಎಂಟಿಸಿಗೆ 1544 ಕೋಟಿ ರೂ. ಕೆಕೆಆರ್​ಟಿಸಿಗೆ 777 ಕೋಟಿ ರೂ. ಎನ್​ಡಬ್ಲೂಕೆಆರ್​ಟಿಸಿಗೆ 1386 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಿದ್ದಾರೆ.

ಸರ್ಕಾರದಿಂದ ಶಕ್ತಿ ಯೋಜನೆಯ ಪೂರ್ತಿ ಮೊತ್ತ ಪಡೆಯಬೇಕಿದೆ. ಪ್ರಪಂಚದ ಯಾವುದೇ ಭಾಗದಲ್ಲಿಯೂ ಸಾರಿಗೆ ನಿಗಮ ನಷ್ಟದಲ್ಲಿದೆ. ಶೇ 40 ರಷ್ಟು ಬಸ್​ಗಳು ನಷ್ಟದಲ್ಲೇ ಓಡುತ್ತಿವೆ. ಶೇ 30ರಷ್ಟು ಬಸ್​ಗಳು ಯಾವುದೇ ಲಾಭ-ನಷ್ಟ ಇಲ್ಲದೆ ಓಡುತ್ತಿವೆ. ಶೇ 30ರಷ್ಟು ಬಸ್​ಗಳು ಮಾತ್ರ ಲಾಭದಲ್ಲಿವೆ. ಸಾರಿಗೆ ಇಲಾಖೆಯಲ್ಲಿ ಪ್ರತಿದಿನ 9.45 ಕೋಟಿ ರೂ. ಖರ್ಚು ಇದೆ. ಏನಾದರೂ ದೂರುಗಳಿದ್ದರೆ ತಿಳಿಸಿ ಸರಿಪಡಿಸೋಣ ಎಂದು ಪರಿಷತ್​ಗೆ ಹೇಳಿದರು.

ಇದನ್ನೂ ಓದಿ
Image
KSRTCಯಲ್ಲಿ ಮಹಿಳಾ ದಿನಾಚರಣೆ: ಮಹಿಳಾ ಸಿಬ್ಬಂದಿಗೆ ಅಭಿನಂದಿಸಿದ ಸಚಿವ
Image
ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ
Image
ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್!
Image
ಮೈಸೂರು: ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ, ಕೆಎಸ್​ಆರ್​ಟಿಸಿ ಆದೇಶ!

ಶಕ್ತಿ ಯೋಜನೆಯಿಂದಾದ ನಷ್ಟ ಎಷ್ಟು ಎಂದು ಎಂಎಲ್​ಸಿ ಕೇಶವ ಪ್ರಸಾದ್ ಮತ್ತೊಂದು ಪ್ರಶ್ನೆ ಕೇಳಿದರು.

ಇದಕ್ಕೆ ಉತ್ತರಿಸಿದ ಸಚಿವರು, “ಶಕ್ತಿ ಯೋಜನೆಗೆ ಒಟ್ಟು 9,978 ಕೋಟಿ ರೂಪಾಯಿ ಖರ್ಚಾಗಿದೆ. 448 ಬಿಎಂಟಿಸಿ ಬಸ್ ಖರೀದಿ ಮಾಡಿದ್ದೇವೆ. 2016ರ ಬಳಿಕ 10 ಸಾವಿರ ಜನರನ್ನ ನೇಮಕ ಮಾಡಿಕೊಂಡಿದ್ದೇವೆ. ಹೊಸದಾಗಿ 5,360 ಬಸ್ ಖರೀದಿಸಲಾಗಿದೆ. ಬಸ್​ಗಳು ಮೊದಲು 1.40 ಸಾವಿರ ಟ್ರಿಪ್​ ಸಂಚರಿಸುತ್ತಿದ್ದವು. ಈಗ 1.90 ಲಕ್ಷ ಟ್ರಿಪ್ ಪ್ರತಿದಿನ ಸಂಚರಿಸುತ್ತಿವೆ. 40 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲಾಗುತ್ತಿದೆ. ಒಂದು ತಿಂಗಳಿಗೆ ಸಿಬ್ಬಂದಿಯಿಂದ 650 ರೂ.‌ ಪಡೆಯಲಾಗುತ್ತಿದೆ. ಸಿಬ್ಬಂದಿಯ ಇಡೀ ಕುಟುಂಬಕ್ಕೆ ಚಿಕಿತ್ಸೆ ನೀಡಲು ಇದು ಸಹಾಯವಾಗಿದೆ” ಎಂದು ಹೇಳಿದರು.

ಹಣ ಬಿಡುಗಡೆ ಪತ್ರ ಬರೆದಿದ್ದ ಎಂಡಿ

ಕಳೆದ ವರ್ಷ 2024ರ ಡಿಸೆಂಬರ್​ನಲ್ಲಿ ಎನ್​ಡಬ್ಲೂಕೆ​ಆರ್​ಟಿಸಿಯ ವ್ಯವಸ್ಥಾಪಕ ನಿರ್ದೇಶಕಿ ಎಮ್​. ಪ್ರಿಯಾಂಗಾ ಅವರು ಆರ್ಥಿಕ ಇಲಾಖೆಗೆ ಬಾಕಿ ಇರುವ 414 ಕೋಟಿ ರೂ. ಬಿಡುಗಡೆ ಮಾಡುವಂತೆ ಪತ್ರ ಬರೆದಿದ್ದರು.

ಈ ವಿಚಾರವಾಗಿ ಟಿವಿ9 ಜೊತೆ ಮಾತನಾಡಿದ್ದ ಎಮ್​. ಪ್ರಿಯಾಂಗಾ ಅವರು, ನಾಲ್ಕೂ ವಿಭಾಗದ ನಿರ್ದೇಶಕ ಮಂಡಳಿಯಲ್ಲೂ ಈ ವಿಚಾರ ಚರ್ಚೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇವೆ. ಹಣ ಬಿಡುಗಡೆ ‌ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸರ್ಕಾರದ 34 ನಿಗಮಗಳು ನಷ್ಟದಲ್ಲಿ, 16 ಬಂದ್

ಅಲ್ಲದೇ, ಎನ್​ಡಬ್ಲೂಕೆ​ಆರ್​ಟಿಸಿಯಲ್ಲಿ ಒಂದು ದಿನಕ್ಕೆ ಸುಮಾರು 25 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಸರಾಸರಿ 16 ಲಕ್ಷ ಜನ ಶಕ್ತಿ ಯೋಜನೆ ಫಲಾನುಭವಿಗಳು ಪ್ರಯಾಣ ಮಾಡುತ್ತಾರೆ. ಒಂದು ತಿಂಗಳಿಗೆ 120 ಕೋಟಿ ಶೂನ್ಯ ಟಿಕೆಟ್ ಪ್ರಯಾಣದ ದರವಾಗತ್ತೆ. ಈ‌ ಪೈಕಿ ಸರ್ಕಾರದಿಂದ 102 ಕೋಟಿ ಹಣ ವಾಪಸ್ ಬರುತ್ತಿದೆ. ಬಾಕಿ 414 ಕೋಟಿ ಹಣ ಬರಬೇಕಾಗಿದೆ ಎಂದಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Wed, 12 March 25

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್