AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟ ಸಾರಿಗೆ ನಿಗಮ ಸಿಬ್ಬಂದಿಗೆ ಸಿಕ್ಕಿಲ್ಲ ಪರಿಹಾರ: ಕೇಳಿ ಬಂದಿದೆ ಲಂಚದ ಆರೋಪ

ಪರಿಹಾರ ನೀಡುವುದಕ್ಕೂ ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. 30 ಲಕ್ಷ ರೂಪಾಯಿ ಪರಿಹಾರ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಕೊರೊನಾದಿಂದ ಮೃತಪಟ್ಟ ಸಾರಿಗೆ ನಿಗಮ ಸಿಬ್ಬಂದಿಗೆ ಸಿಕ್ಕಿಲ್ಲ ಪರಿಹಾರ: ಕೇಳಿ ಬಂದಿದೆ ಲಂಚದ ಆರೋಪ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
Follow us
TV9 Web
| Updated By: ganapathi bhat

Updated on:Oct 03, 2021 | 2:52 PM

ಬೆಂಗಳೂರು: ಕೊವಿಡ್ 19 ಸೋಂಕಿಗೆ ಬಲಿಯಾಗಿದ್ದ ಸಾರಿಗೆ ಸಿಬ್ಬಂದಿಗೆ ಪರಿಹಾರ ನೀಡಲು ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. ಇದುವರೆಗೆ ಕೊವಿಡ್ ಸೋಂಕಿನಿಂದ ಮೃತಪಟ್ಟ 213 ಸಿಬ್ಬಂದಿ ಪೈಕಿ ಕೇವಲ 7 ಜನರಿಗೆ ಮಾತ್ರ ಪರಿಹಾರ ನೀಡಲಾಗಿದೆ. ಪರಿಹಾರ ನೀಡುವುದಕ್ಕೂ ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. 30 ಲಕ್ಷ ರೂಪಾಯಿ ಪರಿಹಾರ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಅಧಿಕಾರಿಗಳಿಗೆ ಲಂಚ ನೀಡಿದರೆ ಮಾತ್ರ ನಿಯಮ ಸಡಿಲಿಕೆ ಮಾಡುತ್ತಾರೆ. ಮನಸೋಇಚ್ಛೆ ನಿಯಮ ಮಾಡಿರುವ ಸಾರಿಗೆ ನಿಗಮಗಳು, ಪರಿಹಾರ ನೀಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಲಾಗಿದೆ. ಕೊರೊನಾಗೆ ಬಲಿಯಾದ ಸಾರಿಗೆ ಸಿಬ್ಬಂದಿ ವರದಿ ನೀಡಿರಬೇಕು. ರಜೆ ಪಡೆದಿದ್ದ 5 ದಿನದೊಳಗೆ ವರದಿಯನ್ನ ಸಲ್ಲಿಸಿರಬೇಕು. ಕೊರೊನಾ ಬಿಟ್ಟು ಬೇರೆ ಆರೋಗ್ಯ ಸಮಸ್ಯೆ ಇರಬಾರದು. ಕೊರೊನಾಗೆ ಬಲಿಯಾಗಿದ್ದಾನೆಂದು ವರದಿ ನೀಡಿರಬೇಕು. ವೈದ್ಯರು ವರದಿ ನೀಡಬೇಕೆಂದು ಇಲಾಖೆ ನಿಯಮ ಮಾಡಿದೆ.

ಸಾರಿಗೆ ನೌಕರರು ಕೊರೊನಾದಿಂದ ಮೃತಪಟ್ಟರೆ ಮೂವತ್ತು ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಕೆಎಸ್ಆರ್​ಟಿಸಿ ಬಿಎಂಟಿಸಿಯ ವಾಯುವ್ಯ ಕಲ್ಯಾಣ ಕರ್ನಾಟಕ ಸಾರಿಗೆಯ 213 ನೌಕರರು ಸೋಂಕಿನಿಂದ ಮೃತಪಟ್ಟಿದ್ರು. ಆದರೆ, ಇಲ್ಲಿಯವರೆಗೆ 7 ಜನರಿಗೆ ಮಾತ್ರ 30 ಲಕ್ಷ ರೂಪಾಯಿ ನೀಡಿದ್ದಾರೆ. ಇತ್ತ ಮನೆಯ ಯಜಮಾನನು ಇಲ್ಲದೆ, ಪರಿಹಾರವು ಇಲ್ಲದೆ ಕುಟುಂಬಸ್ಥರು ಕಷ್ಟ ಪಡುವಂತಾಗಿದೆ.

ಬಿಎಂಟಿಸಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 109 ಆಗಿದೆ. ಕೆಎಸ್​ಆರ್​ಟಿಸಿ ವಾಯುವ್ಯ ಮತ್ತು ಈಶಾನ್ಯ ಕರ್ನಾಟಕ ಸಾರಿಗೆಯಿಂದ 104 ನೌಕರರು ಮೃತಪಟ್ಟಿದ್ದರು. ಸಂಕಷ್ಟದ ಸಮಯದಲ್ಲಿ ಜನರ ಸೇವೆಗೆ ನಿಂತವರು ಸಾರಿಗೆ ನೌಕರರು, ಆದರೆ ಈಗ ರಾಜ್ಯ ಸರ್ಕಾರ ಅವರನ್ನು ನಡು ನೀರಲ್ಲಿ ಕೈಬಿಟ್ಟಿದೆ ಎಂಬ ಮಾತುಗಳು ಕೇಳಿಬಂದಿದೆ.

ಮೃತರಲ್ಲಿ ಕೆಲವರು ರಜೆಯ ಮೇಲಿದ್ದರು, ಮತ್ತೆ ಕೆಲವರಿಗೆ ಮೊದಲೇ ಅರೋಗ್ಯ ಸಮಸ್ಯೆಗಳಿತ್ತು. ಕೆಲವರಿಗೆ ಆಸ್ಪತ್ರೆಯ ವೈದ್ಯರಿಂದ ಯಾವುದೇ ಸರ್ಟಿಫಿಕೇಟ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಾವು ಯಾವುದೇ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಇಲಾಖೆಯವರು ಜಾರಿಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಕೊರೊನಾ ಕಠಿಣ ಕಾಲದಲ್ಲಿ ಕೆಲಸಕ್ಕೆ ಬರುವಂತೆ ಒತ್ತಡ ಹೇರಿದ್ದರು. ಆದರೆ ನೌಕರರಿಗೆ ಕೊರೊನಾ ಬಂದು ಸಾವನ್ನಪ್ಪುತ್ತಿರುವ ವೇಳೆ ಸರ್ಕಾರ ಅವರನ್ನು ಕೈಬಿಟ್ಟಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತರ ಕುಟುಂಬದ ಸದಸ್ಯರಿಗೆ ಒಟ್ಟು 1.50 ಲಕ್ಷ ರೂ. ಪರಿಹಾರ: ಗೊಂದಲಗಳಿಗೆ ತೆರೆ

ಇದನ್ನೂ ಓದಿ: ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು

Published On - 2:49 pm, Sun, 3 October 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ