ಅಕ್ಕಮಹಾದೇವಿ ಮಹಿಳಾ ವಿವಿ, ಮಹಾರಾಣಿ ಕ್ಲಸ್ಟರ್ ವಿವಿ, ಧಾರವಾಡ ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ

|

Updated on: Apr 17, 2021 | 9:24 PM

ಸಾರಿಗೆ ಸಿಬ್ಬಂದಿ ಮುಷ್ಕರ ಹಿನ್ನೆಲೆಯಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಅಕ್ಕಮಹಾದೇವಿ ಮಹಿಳಾ ವಿವಿ, ಮಹಾರಾಣಿ ಕ್ಲಸ್ಟರ್ ವಿವಿ, ಧಾರವಾಡ ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ
ಪರೀಕ್ಷೆ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಹಿನ್ನೆಲೆಯಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಏಪ್ರಿಲ್ 19ರಂದು ನಡೆಯಬೇಕಿದ್ದ ಅಕ್ಕಮಹಾದೇವಿ ಮಹಿಳಾ ವಿವಿಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಸಂಬಂಧ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ಸಾರಿಗೆ ಸಿಬ್ಬಂದಿಯ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿವಿಯ ಎಲ್ಲ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಎಲ್ಲ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನೂ ಸಾರಿಗೆ ಸೇವೆ ಪುನಾರಂಭಗೊಳ್ಳುವವರೆಗೂ ಮುಂದೂಡಲಾಗಿದೆ. ಈ ಕುರಿತು ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿವಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಏಪ್ರಿಲ್ 19, 20ರಂದು ನಿಗದಿಯಾಗಿದ್ದ ಕರ್ನಾಟಕ ವಿವಿ ಪದವಿ ಪರೀಕ್ಷೆಗಳನ್ನು ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರು ವಿವಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ವಿವಿ ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಪ್ರವೇಶ ನಿರ್ಬಂಧಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ. ಮುಂದಿನ ಆದೇಶದವರೆಗೆ ವಿವಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧ, ಬಹುಮಹಡಿ ಕಟ್ಟಡಕ್ಕೆ ಸಾರ್ಜನಿಕರಿಗೆ ನಿರ್ಬಂಧಿಸಲಾಗಿದೆ.

(KSRTC BMTC strike Examination of Akkamahadevi Mahila University Maharani Cluster Dharwad Karnataka University Postponed)

ಇದನ್ನೂ ಓದಿ: NEET PG Exam Postponed: ಕೊರೊನಾ ಹೆಚ್ಚಳ: ಸ್ನಾತಕೋತ್ತರ ಪದವಿಯ ನೀಟ್ ಪರೀಕ್ಷೆ ಮುಂದೂಡಿಕೆ

ಇದನ್ನೂ ಓದಿ: Karnataka SSLC Exam 2021: ಸಿಬಿಎಸ್​ಇ ಪರೀಕ್ಷೆ ರದ್ದಿನಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನವಿಲ್ಲ: ಸಚಿವ ಸುರೇಶ್ ಕುಮಾರ್