Bus Strike: ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ; ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ

BMTC KSRTC Bus Workers Protest: ನಾಳೆ ಸಾರಿಗೆ ನೌಕರರ ಮುಷ್ಕರ ಮಾಡಲು ಮುಂದಾದ್ರೆ ಸಾರಿಗೆ ಇಲಾಖೆಯಿಂದ ಪರ್ಯಾಯ ವ್ಯವಸ್ಥೆ ಮಾಡ್ತೇವೆ. ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ. ಬಸ್‌ಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಆ್ಯಕ್ಟ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ.

Bus Strike: ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ; ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on:Apr 06, 2021 | 7:42 PM

ಬೆಂಗಳೂರು: ಕೊವಿಡ್ ಕಾರಣ ಮುಷ್ಕರ ಮಾಡದಂತೆ ಸಾರಿಗೆ ಇಲಾಖೆ ನೌಕರರಲ್ಲಿ ಮನವಿ ಮಾಡುತ್ತೇವೆ. ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. 6ನೇ ವೇತನ ಆಯೋಗ ಜಾರಿಗೆ ಮನವಿ ಮಾಡಿದ್ದಾರೆ. ಆದರೆ ನೀತಿಸಂಹಿತೆ ಜಾರಿಯಾದ ಕಾರಣ 6ನೇ ವೇತನ ಆಯೋಗದ ಬೇಡಿಕೆ ಈಡೇರಿಸಲು ಆಗಲ್ಲ. ಸಾರಿಗೆ ಇಲಾಖೆಗೆ ಆದಾಯ ಇಲ್ಲದಿದ್ದರೂ ಲಾಕ್‌ಡೌನ್ ಸಮಯದಲ್ಲೂ ಸಂಬಳ ನೀಡಲಾಗಿದೆ. ನಾಳೆ ಸಾರಿಗೆ ನೌಕರರ ಮುಷ್ಕರ ಮಾಡಲು ಮುಂದಾದ್ರೆ ಸಾರಿಗೆ ಇಲಾಖೆಯಿಂದ ಪರ್ಯಾಯ ವ್ಯವಸ್ಥೆ ಮಾಡ್ತೇವೆ. ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ. ಬಸ್‌ಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಆ್ಯಕ್ಟ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ. ಎಸ್ಮಾ ಜಾರಿ ಮಾಡುವ ಸಂಬಂಧವೂ ಚರ್ಚಿಸಿದ್ದೇವೆ. ಸೌರಿಗೆ ನೌಕರರು ಕೆಲಸಕ್ಕೆ ಗೈರಾದರೆ, ಸಂಬಳ ಕಡಿತ ಮಾಡುತ್ತೇವೆ. ಸಾರಿಗೆ ಇಲಾಖೆಯಿಂದ ಪ್ರತಿದಿನ 4 ಕೋಟಿ ನಷ್ಟವಾಗ್ತಿದೆ. ಇದರ ನಡುವೆಯೂ ನಾವು ಸಂಬಳವನ್ನು ನೀಡುತ್ತಿದ್ದೇವೆ. ಎಲ್ಲ ಖಾಸಗಿ ವಾಹನ ಓಡಿಸುವುದಕ್ಕೆ ಅನುಮತಿ ನೀಡುತ್ತೇವೆ. ಖಾಸಗಿ ವಾಹನಗಳಲ್ಲಿ ಓಡಾಟಕ್ಕೆ ದರ ಫಿಕ್ಸ್ ಮಾಡುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್   ಕಠಿಣ ಎಚ್ಚರಿಕೆ ನೀಡಿದರು.

ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಘೋಷಿಸಿದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯ ಸಾರಿಗೆ 4 ನಿಗಮಗಳ  ಎಂಡಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಾರಿಗೆ ಇಲಾಖೆ ಆಯುಕ್ತ ಅಜುಂ ಪರ್ವೇಜ್, ಉಪಸ್ಥಿತರಿದ್ದರು.

ಈಗಾಗಲೇ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​, ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಬೇಡಿಕೆ ಈಡೇರಿಸುವಂತೆ ನಾವು ಸರ್ಕಾರಕ್ಕೆ 3 ತಿಂಗಳ ಗಡುವು ನೀಡಿದ್ದೆವು. ಸರ್ಕಾರವೂ ಡಿಸೆಂಬರ್ 14ರಂದು ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು. ಅದು ಸುಳ್ಳು ಭರವಸೆ ಎಂದು ಈಗ ಗೊತ್ತಾಗಿದೆ. ನಮಗೆ ನೀಡಿದ ಭರವಸೆ, ಆಶ್ವಾಸನೆಗಳು ಈಡೇರುವ ತನಕ ಬಸ್ ಮುಟ್ಟೋದಿಲ್ಲ ಎಂದು ಹೇಳಿದ್ದು, ಮುಷ್ಕರ ಘೋಷಿಸಿದ್ದಾರೆ.

ಸರ್ಕಾರ ನೌಕರರಿಗೆ ಸಂಬಂಧಿಸಿದ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ ಎನ್ನುತ್ತಿದೆ. ಆದರೆ, ಆ ಯಾವ ಬೇಡಿಕೆಗಳೂ ನೌಕರರ ಪರವಾಗಿಲ್ಲ. ಸರ್ಕಾರ ಮೇ 4ರ ನಂತರ ಭರವಸೆ ಈಡೇರಿಸಲಾಗುವುದು ಎನ್ನುತ್ತಿದೆ. ಆದರೆ, ಆ ಮಾತಿನ ಮೇಲೆ ನಮಗೆ ನಂಬಿಕೆ ಇಲ್ಲ. ಇದು ನೀತಿಸಂಹಿತೆಯ ನೆಪ ಹೇಳಿ ಪಲಾಯನ ಮಾಡಲು ದಾರಿ ಹುಡುಕಿದೆ. ಇದು ಯಾವುದೇ ಹೊಸ ಜನಪ್ರಿಯ ಯೋಜನೆ ಅಲ್ಲ. ನಮಗೆ ಕೊಟ್ಟಿರುವ ಆಶ್ವಾಸನೆ ಈಡೇರಿಸುತ್ತಿದ್ದಾರೆ ಅಷ್ಟೇ. ಇದಕ್ಕೆಲ್ಲಾ ನೀತಿಸಂಹಿತೆ ಅಡ್ಡಿಯಾಗದು ಎಂದು ಹೇಳಿದ್ದಾರೆ.

ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಏನಂದಿದ್ದಾರೆ? ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಒಳ್ಳೆಯದಲ್ಲ ಕೈ ಬಿಡಿ ಅಂತಾ ಹೇಳಿದ್ದೇನೆ. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಭರವಸೆ ನೀಡಲು ಬರೋದಿಲ್ಲ. ಮೇ ನಾಲ್ಕರವರಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಸದ್ಯ ಇದನ್ನು ಮುಂದಕ್ಕೆ ಹಾಕಬೇಕು. ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಎಲ್ಲರನ್ನು ಕರೆದು ಮಾತನಾಡಿದ್ದೇನೆ. ಇಂದು ಕಾರ್ಮಿಕ ನಾಯಕರ ಜೊತೆ ಮೀಟಿಂಗ್ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಬೇಕಿದೆ. ಮಧ್ಯಾಹ್ನದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸರ್ಕಾರದ ವಿರುದ್ಧ ಯತ್ನಾಳ ಸೇರಿದಂತೆ ಕೆಲವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಇರುವ ಸಣ್ಣಪುಟ್ಟ ಗೊಂದಲಗಳನ್ನು ಮತ್ತು ಅಸಮಾಧಾನಗಳನ್ನು ವರಿಷ್ಠರು ಸರಿಪಡಿಸುತ್ತಾರೆ. ಕಾಂಗ್ರೆಸ್​ ಕೂಡಾ ಮನೆಯೊಂದು ಮೂರು ಬಾಗಿಲು ಅಂತಾಗಿದೆ. ಯತ್ನಾಳರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಅದು ಅವರ ವೈಯ್ಯಕ್ತಿಕ ಹೇಳಿಕೆ  ಎಂದು ಹೇಳಿದ್ದಾರೆ.

ಇಂದು ಮಧ್ಯಾಹ್ನದಿಂದಲೇ ಬಂದ್? ಸಾರಿಗೆ ನೌಕರರು ಇದೀಗ ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಪರಿಣಾಮ ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ನಡೆಸುವುದು ಅನುಮಾನವಾಗಿದೆ. 6ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿಯಲಿರುವ ಸಾರಿಗೆ ನೌಕರರು ಅನಿರ್ದಿಷ್ಟ ಚಳುವಳಿಗೆ ಸಜ್ಜಾಗಿದ್ದಾರೆ. BMTC, KSRTC, NWKRTC, NEKRTC ಸಿಬ್ಬಂದಿ ಕುಟುಂಬ ಸಮೇತರಾಗಿ ಮುಷ್ಕರದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ.

(KSRTC BMTC workers 6th pay commission demand can’t be served says chief general secretary P Ravikumar)

ಇದನ್ನೂ ಓದಿ: ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

ಕೊವಿಡ್ ಸಮಯದಲ್ಲಿ ಸಾರಿಗೆ ನೌಕರರ ಮುಷ್ಕರ ಸರಿಯಲ್ಲ: ಸಚಿವ ಲಕ್ಷ್ಮಣ ಸವದಿ

Published On - 12:02 pm, Tue, 6 April 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?