Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ನಾನು ಗೃಹ ಸಚಿವರ ಜತೆ ಚರ್ಚಿಸಿದ್ದೇನೆ. ನೌಕರರ 10 ಬೇಡಿಕೆ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆ ಈಡೇರಿಸಲು ಸಾಧ್ಯವಾಗದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಖರ್ಚಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಅಸಾಧ್ಯ. ಇನ್ನೊಮ್ಮೆ ಚರ್ಚೆ ಮಾಡಿ ಪ್ರತಿಭಟನೆ‌ ನಡೆಸದಂತೆ […]

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್
ಆರ್.ಅಶೋಕ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 06, 2021 | 3:19 PM

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ನಾನು ಗೃಹ ಸಚಿವರ ಜತೆ ಚರ್ಚಿಸಿದ್ದೇನೆ. ನೌಕರರ 10 ಬೇಡಿಕೆ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆ ಈಡೇರಿಸಲು ಸಾಧ್ಯವಾಗದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಖರ್ಚಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಅಸಾಧ್ಯ. ಇನ್ನೊಮ್ಮೆ ಚರ್ಚೆ ಮಾಡಿ ಪ್ರತಿಭಟನೆ‌ ನಡೆಸದಂತೆ ಮನವಿ ಸಲ್ಲಿಸುತ್ತೇವೆ ಎಂದು ದೇವನಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಇತ್ತ ಸಾರಿಗೆ ನೌಕರರ ಮುಷ್ಕರದ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿದ ತೋಟಗಾರಿಕೆ ಸಚಿವ ಆರ್.ಶಂಕರ್, ‘ನೌಕರರು ಮುಷ್ಕರ ಮಾಡ್ತಿರುವುದು ಇದೇ‌ ಮೊದಲಲ್ಲ. ಸರ್ಕಾರ ಸಾರಿಗೆ ನೌಕರರನ್ನು ಕರೆದು ತೀರ್ಮಾನ ಮಾಡುತ್ತದೆ. ಯಾವುದೇ ಮುಷ್ಕರ ಮಾಡಿದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ‌ ನೊಡಿಕೊಳ್ಳಬೇಕು ಎಂದು ಮನವಿ ಸಲ್ಲಿಸುತ್ತೇನೆ. ಏನೇ ಇದ್ದರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ, ಮಾತುಕತೆಗೆ ಸರ್ಕಾರ‌ ಬದ್ಧವಿದೆ ಎಂದು ಹೇಳಿದರು.

ಸರ್ಕಾರ ಎಸ್ಮಾ ಜಾರಿ ಮಾಡುತ್ತೆ ಎಂಬ ಎಚ್ಚರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಸರ್ಕಾರ ಮತ್ತು ನೌಕರರು ಒಂದು ವಾಹನದ ಎರಡು ಚಕ್ರ ಇದ್ದಂತೆ. ಒಟ್ಟಾಗಿ ಹೋದರೆ ಮಾತ್ರ ಜನಸಾಮಾನ್ಯರಿಗೆ ಕ್ಷೇಮ ಲಭಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Bus Strike: ಹೆಚ್ಚು ಪ್ರಯಾಣಿಕರು ಸಂಚಾರ ಮಾಡುವ ಮಾರ್ಗ​ಗಳಲ್ಲಿ ನಾಳೆ ಖಾಸಗಿ ವಾಹನಗಳು ಸಂಚಾರ ಮಾಡಲಿವೆ: ಬಿಎಂಟಿಸಿ ಎಂಡಿ ಸಿ.ಶಿಖಾ

( KSRTC BMTC workers demands can not be acceptable says Karnataka Minister R Ashok in Devanahalli)

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ