AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

ಕೆಎಸ್ಆರ್​ಟಿಸಿ ಡಿಪೋಗಳಿಂದ ಹೊರರಾಜ್ಯಕ್ಕೆ ಹೋಗುವ ಬಸ್​ಗಳಲ್ಲಿ ಡ್ಯೂಟಿ ಬೇಕು ಅಂದರೆ ಅಧಿಕಾರಿಗಳಿಗೆ ಲಂಚ ಕೊಡಬೇಕು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ವೇಳೆ ಲಂಚ ಕೊಡದಿದ್ದರೆ ಕಿರುಕುಳ ಕೊಡುತ್ತಾರೆ ಎನ್ನಲಾಗಿದೆ. ಇದೀಗ ಈ ಆರೋಪ ಸಂಬಂಧ ಮತ್ತು ಗೂಗಲ್ ಪೇ ಮೂಲಕ ಲಂಚ ಪಡೆದಿರುವ ಸಂಪೂರ್ಣ ದಾಖಲೆ ‘ಟಿವಿ9’ಗೆ ಲಭ್ಯವಾಗಿದೆ.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!
ಕೆಎಸ್ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on:Aug 25, 2025 | 7:41 AM

Share

ಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ಟಿವಿ9’ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು. ಇದೀಗ ಲಂಚ ಪಡೆಯುವ ಸರದಿ ಕೆಎಸ್ಆರ್​ಟಿಸಿಗೂ (KSRTC) ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದಕ್ಕೆ ಸಾಕ್ಷ್ಯವೂ ಲಭ್ಯವಾಗಿದೆ. ಕೆಎಸ್ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100ಕ್ಕೂ ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆಬೇರೆ ರಾಜ್ಯಗಳಿಗೆ ಸಂಚಾರ ಮಾಡುತ್ತವೆ. ಇದರಿಂದ ಚಾಲಕ ಮತ್ತು ಕಂಡಕ್ಟರ್​ಗಳಿಗೆ ಸಾವಿರಾರು ರೂಪಾಯಿ ಭತ್ಯೆ ಮತ್ತು ಒಟಿ ದೊರೆಯುತ್ತದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಅಸಿಸ್ಟೆಂಟ್ ಟ್ರಾಫಿಕ್ ಇನ್ಸ್‌ಪೆಕ್ಟರ್ (ATI) ಸಂಗೀತ, ಅಸಿಸ್ಟೆಂಟ್ ಟ್ರಾಫಿಕ್ ಸೂಪರಿಂಟೆಂಡೆಂಟ್ (ATS) ಸ್ವಪ್ನ, ಡ್ರೈವರ್ ಮತ್ತು ಕಂಡಕ್ಟರ್​​ಗಳಿಂದ ಗೂಗಲ್ ಪೇ, ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದು, ಈ ಬಗ್ಗೆ ಕೆಎಸ್ಆರ್​ಟಿಸಿ ಎಂಡಿಗೆ ದಾಖಲೆ ಸಮೇತ ದೂರು ನೀಡಲಾಗಿದೆ.

ಹಣ ನೀಡಿಲ್ಲವೆಂದಾದರೆ ಅಂತಹ ಡ್ರೈವರ್, ಕಂಡಕ್ಟರ್​​ಗಳಿಗೆ ಸರಿಯಾಗಿ ಡ್ಯೂಟಿ ನೀಡದೆ ಮತ್ತು ರಜೆ ನೀಡದೆ ಸತಾಯಿಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಡ್ರೈವರ್, ಕಂಡಕ್ಟರ್​ಗಳು ಅನಿವಾರ್ಯವಾಗಿ ಲಂಚ ನೀಡಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಈ ಇಬ್ಬರು ಅಧಿಕಾರಿಗಳು ಕೇವಲ ಉದಾಹರಣೆ ಅಷ್ಟೇ, ಕೆಎಸ್ಆರ್​ಟಿಸಿ ಡಿಪೋಗಳಲ್ಲಿ ಲಂಚ ನೀಡಿದರೆ ಮಾತ್ರ ಡ್ಯೂಟಿ ಎಂಬ ಕೆಟ್ಟ ವ್ಯವಸ್ಥೆ ಜಾರಿಯಾಲಿದ್ದು, ಈ ಹಣದಲ್ಲಿ ಹಿರಿಯ ಅಧಿಕಾರಿಗಳಿಗೂ ಪಾಲಿದೆ ಎಂಬ ಗಂಭೀರ ಆರೋಪವಿದೆ.

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆದ ಆರೋಪ: ಸಾರಿಗೆ ಸಚಿವರು ಹೇಳಿದ್ದೇನು?

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆಯುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಕೂಡಲೇ ಕ್ರಮ ಕೈಗೊಳ್ಳಲು ಕೆಎಸ್ಆರ್​ಟಿಸಿ ಎಂಡಿ ಅಕ್ರಂ ಪಾಷ ಅವರಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬದ ಪ್ರಯುಕ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಒಟ್ಟಿನಲ್ಲಿ, ಹಗಲು ರಾತ್ರಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಕಂಡಕ್ಟರ್, ಡ್ರೈವರ್​​ಗಳ ಬಳಿಯೇ ಈ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದರೆ, ಇವರಿಗೆಲ್ಲ ಹಿರಿಯ ಅಧಿಕಾರಿಗಳ ಬೆಂಬಲ ಇಲ್ಲದೆ ಇರುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸರಿಯಾದ ತನಿಖೆ ಮಾಡಿದರೆ ಎಲ್ಲವೂ ಬಯಲಿಗೆ ಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Mon, 25 August 25

Follow Us
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ