KSRTC ಬಸ್ ಡಿಕ್ಕಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ಈ ದುರ್ಘಟನೆ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

KSRTC ಬಸ್ ಡಿಕ್ಕಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು
KSRTC ಬಸ್ ಡಿಕ್ಕಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 15, 2022 | 8:00 PM

ಹಾಸನ: ಕೆಎಸ್ ಆರ್ ಟಿ ಸಿ (KSRTC) ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ಈ ದುರ್ಘಟನೆ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಂಟೇನರ್ ಡಿಕ್ಕಿ, ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್​ ತಾಲೂಕಿನ ಬಂಗೂರು ಬಳಿ ಕಂಟೇನರ್ ಡಿಕ್ಕಿಯಾಗಿ ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ಆರು ಜನರಿಗೆ ಗಾಯಗಳಾಗಿವೆ. ಮೃತಪಟ್ಟವರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳಾಗಿದ್ದಾರೆ. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಈ ರಸ್ತೆ ಅಪಘಾತ ನಡೆದಿದೆ.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ (Home minister Araga Jnanendra) ಬೆಂಗಾವಲು ಜೀಪ್ (convoy vehicle ) ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Published On - 7:59 pm, Mon, 15 August 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ