ಹಾಸನ: ಕೆಎಸ್ ಆರ್ ಟಿ ಸಿ (KSRTC) ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ಈ ದುರ್ಘಟನೆ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಂಟೇನರ್ ಡಿಕ್ಕಿ, ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಬೀದರ್: ಬೀದರ್ ತಾಲೂಕಿನ ಬಂಗೂರು ಬಳಿ ಕಂಟೇನರ್ ಡಿಕ್ಕಿಯಾಗಿ ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ಆರು ಜನರಿಗೆ ಗಾಯಗಳಾಗಿವೆ. ಮೃತಪಟ್ಟವರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳಾಗಿದ್ದಾರೆ. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಈ ರಸ್ತೆ ಅಪಘಾತ ನಡೆದಿದೆ.
ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ (Home minister Araga Jnanendra) ಬೆಂಗಾವಲು ಜೀಪ್ (convoy vehicle ) ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.
Published On - 7:59 pm, Mon, 15 August 22