ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ
ಯಾದಗಿರಿ: ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದಿಂದ ಕಲಬುರ್ಗಿಗೆ ಹೋಗುತ್ತಿದ್ದ ಬಸ್ಗೆ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಬಸ್ ಚಾಲಕ ಅಪಘಾತವನ್ನು ನಿಯಂತ್ರಿಸಲು ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾದಗಿರಿ: ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದಿಂದ ಕಲಬುರ್ಗಿಗೆ ಹೋಗುತ್ತಿದ್ದ ಬಸ್ಗೆ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ ಅಡ್ಡ ಬಂದಿದ್ದಾನೆ.
ಬಸ್ ಚಾಲಕ ಅಪಘಾತವನ್ನು ನಿಯಂತ್ರಿಸಲು ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.