ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಪ್ರಯಾಣಿಕರು ಮತ್ತು ನಿರ್ವಾಹಕನ ನಡುವೆ ಮಾರಾಮಾರಿ ನಡೆದಿದೆ. ಪ್ರಯಾಣಿಕರು ಬಸ್‌ನಲ್ಲಿ ಸಿಪ್ಪೆ ಬಿಸಾಡಿದ್ದನ್ನು ನಿರ್ವಾಹಕ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಪರಿಣಾಮ, ಮೂವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Image Credit source: Google
Edited By:

Updated on: Feb 25, 2026 | 5:52 PM

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ ಕನಕಪುರದ ಮುನಿಮಾದಯ್ಯಗೆ ಥಳಿಸಿದ್ದಾರೆ. ಘಟನೆಯಲ್ಲಿ ಮೂವರೂ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಲಾಟೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: KSRTC ಬಸ್ ಸೀಜ್; ಪ್ರಯಾಣಿಕರ ಸಮೇತ ಠಾಣೆಗೆ ತಂದ ಟ್ರಾಫಿಕ್ ಪೊಲೀಸ್

ರಸ್ತೆ ಮಧ್ಯೆ ಕೆಟ್ಟು ನಿಂತ KSRTC ಬಸ್

ರಸ್ತೆ ಮಧ್ಯೆಯೇ KSRTC ಬಸ್​ ಕೆಟ್ಟುನಿಂತ ಪರಿಣಾಮ, ವಾಹನ ತಳ್ಳಿ ತಳ್ಳಿ ಪ್ರಯಾಣಿಕರು ಹಾಗೂ ನಿರ್ವಾಹಕ ಹೈರಾಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೋಳ ರಾಮೇಶ್ವರ ದೇವಾಲಯ ಬಳಿ ನಡೆದಿದೆ. ಮೂಡಿಗೆರೆಯಿಂದ ಚಿಕ್ಕಮಗಳೂರು ಬಸ್​​ ನಿಲ್ದಾಣಕ್ಕೆ ಬರುತ್ತಿದ್ದ ಬಸ್​​ ಅರ್ಧ ದಾರಿಯಲ್ಲೇ ಕೈಕೊಟ್ಟ ಪರಿಣಾಮ, ಇತರ ವಾಹನಗಳ ಸಂಚಾರಕ್ಕೂ ತೊಂದರೆಯಾಗಿದೆ. ಟ್ರಾಫಿಕ್​​ ಜಾಮ್​​ ಉಂಟಾಗಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪ್ರಯಾಣಿಕರ ಬಾಯಾರಿಕೆ ನೀಗಿಸುತ್ತಿರುವ ಬಸ್​​ ಸಿಬ್ಬಂದಿ

ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ KSRTC ಚಾಲಕ ಮತ್ತು ನಿರ್ವಾಹಕರು ಆಸರೆಯಾಗಿದ್ದು, ಬಸ್​​ನಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಟಿ.ನರಸೀಪುರ , ಬನ್ನೂರು ಮತ್ತು ಮಂಡ್ಯ ಮಾರ್ಗದ ಬಸ್​​ಗಳಲ್ಲಿ ಪ್ರಯಾಣಿಕರ ದಾಹ ನೀಗಿಸಲು ಸಾರಿಗೆ ಸಿಬ್ಬಂದಿ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ. ಶುದ್ಧ ನೀರಿನ ಘಟಕಗಳಿಂದ ಪ್ರತಿದಿನ 2-3 ಕ್ಯಾನ್ ನೀರು ತರುವ ಸಿಬ್ಬಂದಿ, ಜನರ ಮುಖದಲ್ಲಿನ ತೃಪ್ತಿಯೇ ನಮಗೆ ಸಿಗುವ ದೊಡ್ಡ ಗೌರವ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us