AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buses in Mysuru: ಸೋಮವಾರದಿಂದಲೇ ಮೈಸೂರಿನಲ್ಲಿ ಬಸ್ ಸಂಚಾರ ಆರಂಭ

ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗಗಳಿಂದ ಸಾರಿಗೆ ಸೇವೆ ಆರಂಭಿಸಲು ಸರ್ಕಾರ ಸೂಚಿಸಿದೆ. ಹೀಗಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

Buses in Mysuru: ಸೋಮವಾರದಿಂದಲೇ ಮೈಸೂರಿನಲ್ಲಿ ಬಸ್ ಸಂಚಾರ ಆರಂಭ
ಕೆಎಸ್​ಆರ್​ಟಿಸಿ ಬಸ್​ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jun 26, 2021 | 5:57 PM

Share

ಮೈಸೂರು: ಸೋಮವಾರದಿಂದ (ಜೂನ್ 28) ಮೈಸೂರಿನಲ್ಲಿ ಬಸ್ ಸೇವೆ ಆರಂಭಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗಗಳಿಂದ ಸಾರಿಗೆ ಸೇವೆ ಆರಂಭಿಸಲು ಸರ್ಕಾರ ಸೂಚಿಸಿದೆ. ಹೀಗಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಕೊವಿಡ್ ಪರೀಕ್ಷೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕಾರ್ಯಾಚರಣೆಗೆ ನಿಯೋಜಿಸುವ ಎಲ್ಲಾ ವಾಹನಗಳನ್ನು ಮಾರ್ಗಕ್ಕೆ ನಿಯೋಜಿಸುವ ಮುನ್ನ ಹಾಗೂ ಮಾರ್ಗದಿಂದ ಹಿಂತಿರುಗಿದ ತಕ್ಷಣ ಸ್ಯಾನಿಟೈಸ್ ಮಾಡಲು ತಿಳಿಸಲಾಗಿದ್ದು, ಆಗಾಗ್ಗೆ ಕೈಗಳನ್ನು ಸ್ವಚ್ಚಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಬಸ್‌ಗಳಲ್ಲಿ ಸೀಟಿನ ಶೇಕಡಾ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶವಿದೆ ಎಂದು ಕೆಎಸ್​ಆರ್​ಟಿಸಿ ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜು ಮಾಹಿತಿ ನೀಡಿದ್ದಾರೆ.

ತುಮಕೂರು: ಶೇಕಡಾ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಜುಲೈ 5ರಿಂದ ಖಾಸಗಿ ಬಸ್ ಓಡಿಸಲು ತೀರ್ಮಾನಿಸಲಾಗಿದ್ದು, ಶೇಕಡಾ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ತಿಳಿಸಿದೆ. ಸಾರಿಗೆ ಸಂಸ್ಥೆಗೆ ನಷ್ಟವಾಗಿದ್ದಕ್ಕೆ ಸರ್ಕಾರದಿಂದ ಹಣ ದೊರೆಯಲಿದೆ. ಆದರೆ ನಮಗೆ ಯಾರೂ ಏನೂ ಕೊಟ್ಟಿಲ್ಲ. ಈಗ ನಾವು ಬಸ್ ಓಡಿಸಿದರೆ ಸರ್ಕಾರಕ್ಕೆ ಆದಾಯ ಬರಲಿದೆ. ಸುಮಾರು 35 ಕೋಟಿ ರೂಪಾಯಿ ಆದಾಯ ಬರುತ್ತದೆ. ಹೀಗಾಗಿ ಶೇ.20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಮನವಿ ಮಾಡಲಾಗುತ್ತದ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ

( KSRTC buses will be start service from June 28 in Mysuru)

Published On - 5:50 pm, Sat, 26 June 21

Follow Us
TV9 Web
TV9 Web

TV9 Kannada

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್