Buses in Mysuru: ಸೋಮವಾರದಿಂದಲೇ ಮೈಸೂರಿನಲ್ಲಿ ಬಸ್ ಸಂಚಾರ ಆರಂಭ

| Updated By: guruganesh bhat

Updated on: Jun 26, 2021 | 5:57 PM

ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗಗಳಿಂದ ಸಾರಿಗೆ ಸೇವೆ ಆರಂಭಿಸಲು ಸರ್ಕಾರ ಸೂಚಿಸಿದೆ. ಹೀಗಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

Buses in Mysuru: ಸೋಮವಾರದಿಂದಲೇ ಮೈಸೂರಿನಲ್ಲಿ ಬಸ್ ಸಂಚಾರ ಆರಂಭ
ಕೆಎಸ್​ಆರ್​ಟಿಸಿ ಬಸ್​ (ಸಾಂದರ್ಭಿಕ ಚಿತ್ರ)
Follow us on

ಮೈಸೂರು: ಸೋಮವಾರದಿಂದ (ಜೂನ್ 28) ಮೈಸೂರಿನಲ್ಲಿ ಬಸ್ ಸೇವೆ ಆರಂಭಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗಗಳಿಂದ ಸಾರಿಗೆ ಸೇವೆ ಆರಂಭಿಸಲು ಸರ್ಕಾರ ಸೂಚಿಸಿದೆ. ಹೀಗಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಕೊವಿಡ್ ಪರೀಕ್ಷೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕಾರ್ಯಾಚರಣೆಗೆ ನಿಯೋಜಿಸುವ ಎಲ್ಲಾ ವಾಹನಗಳನ್ನು ಮಾರ್ಗಕ್ಕೆ ನಿಯೋಜಿಸುವ ಮುನ್ನ ಹಾಗೂ ಮಾರ್ಗದಿಂದ ಹಿಂತಿರುಗಿದ ತಕ್ಷಣ ಸ್ಯಾನಿಟೈಸ್ ಮಾಡಲು ತಿಳಿಸಲಾಗಿದ್ದು, ಆಗಾಗ್ಗೆ ಕೈಗಳನ್ನು ಸ್ವಚ್ಚಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಬಸ್‌ಗಳಲ್ಲಿ ಸೀಟಿನ ಶೇಕಡಾ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶವಿದೆ ಎಂದು ಕೆಎಸ್​ಆರ್​ಟಿಸಿ ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜು ಮಾಹಿತಿ ನೀಡಿದ್ದಾರೆ.

ತುಮಕೂರು: ಶೇಕಡಾ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ
ಜುಲೈ 5ರಿಂದ ಖಾಸಗಿ ಬಸ್ ಓಡಿಸಲು ತೀರ್ಮಾನಿಸಲಾಗಿದ್ದು, ಶೇಕಡಾ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ತಿಳಿಸಿದೆ. ಸಾರಿಗೆ ಸಂಸ್ಥೆಗೆ ನಷ್ಟವಾಗಿದ್ದಕ್ಕೆ ಸರ್ಕಾರದಿಂದ ಹಣ ದೊರೆಯಲಿದೆ. ಆದರೆ ನಮಗೆ ಯಾರೂ ಏನೂ ಕೊಟ್ಟಿಲ್ಲ. ಈಗ ನಾವು ಬಸ್ ಓಡಿಸಿದರೆ ಸರ್ಕಾರಕ್ಕೆ ಆದಾಯ ಬರಲಿದೆ. ಸುಮಾರು 35 ಕೋಟಿ ರೂಪಾಯಿ ಆದಾಯ ಬರುತ್ತದೆ. ಹೀಗಾಗಿ ಶೇ.20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಮನವಿ ಮಾಡಲಾಗುತ್ತದ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ: ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ

( KSRTC buses will be start service from June 28 in Mysuru)

Published On - 5:50 pm, Sat, 26 June 21