ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆ ಮಾಡಲಾಗಿದೆ, ಆತಂಕ ಬೇಡವೆಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಈಗಾಗಲೇ ಕೋವಿಡ್ ಸಮಯದಲ್ಲಿ ಸರೆಂಡರ್ ಮಾಡಿದ ಖಾಸಗಿ ನೊಂದಾಯಿತ ಪ್ರಯಾಣಿಕ ವರ್ಗದ ವಾಹನಗಳಿಗೆ ಏಪ್ರಿಲ್ ತಿಂಗಳಿಗೆ ಅನ್ವಯಿಸುವಂತೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.

ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆ ಮಾಡಲಾಗಿದೆ, ಆತಂಕ ಬೇಡವೆಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ನೌಕರರ ಮುಷ್ಕರ (ಸಂಗ್ರಹ ಚಿತ್ರ)
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Apr 07, 2021 | 8:12 PM

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ತಮ್ಮ ಬೇಡಿಕಗಳನ್ನು ಮುಂದಿಟ್ಟು ಬುಧವಾರದಂದು ನಡೆಸಿದ ಮುಷ್ಕರದಿಂದಾಗಿ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿತು. ಗಾಬರಿ ಹುಟ್ಟಿಸುವ ಸಂಗತಿಯೆಂದರೆ ನಾಳೆಯೂ (ಗುರುವಾರ) ಸಿಬ್ಬಂದಿ ವರ್ಗ ಮುಷ್ಕರ ಮುಂದುವರಿಸುವ ನಿರ್ಧಾರ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಪತ್ರಿಕಾ ಪ್ರಕಟಣೆಯೋದನ್ನು ಹೊರಡಿಸಿದ್ದು, ಜನರು ಆತಂಕಪಡುವ ಅವಶ್ಯಕತೆಯಿಲ್ಲ, ಜನರ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.  

‘ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ನಾಳೆಯೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ. ಆದರೆ ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು.’ ಎಂದು ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

‘ಈಗಾಗಲೇ ತಿಳಿಸಿರುವಂತೆ ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದ ಅನುಮತಿಗಾಗಿ ಮನವಿ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಚುನಾವಣಾ ಆಯೋಗವು ಈ ಬಗ್ಗೆ ಅನುಮತಿ ನೀಡಿದಲ್ಲಿ ಈ ಬಗ್ಗೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು,’ ಎಂದು ಸವದಿ ಸ್ಪಷ್ಟಪಡಿಸಿದರು.

ಕೆಲವರ ಚಿತಾವಣೆಯಿಂದ ಈ ಮುಷ್ಕರ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೆಳಗಿನ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

1) ಈಗಾಗಲೇ ಕೋವಿಡ್ ಸಮಯದಲ್ಲಿ ಸರೆಂಡರ್ ಮಾಡಿದ ಖಾಸಗಿ ನೊಂದಾಯಿತ ಪ್ರಯಾಣಿಕ ವರ್ಗದ ವಾಹನಗಳಿಗೆ ಏಪ್ರಿಲ್ ತಿಂಗಳಿಗೆ ಅನ್ವಯಿಸುವಂತೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. (ಆದೇಶ ಸಂಖ್ಯೆ:ಟಿಡಿ01ಟಿಡಿಆರ್2021, ದಿನಾಂಕ: 06.04.2021).

2) ಈ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಖಾಸಗಿ ವಾಹನಗಳ ಮುಖಾಂತರ ಪರ್ಯಾಯ ಕಲ್ಪಿಸುವ ಸಂಬಂಧ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 66(3)(ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 66(1)ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. (ಆದೇಶ ಸಂಖ್ಯೆ:ಟಿಡಿ107ಟಿಡಿಒ 2021, ದಿನಾಂಕ: 07.04.2021).

• ಇಡೀ ರಾಜ್ಯದಲ್ಲಿ ಖಾಸಗಿ ಟ್ಯಾಕ್ಸಿ, ಮಿನಿ ಬಸ್, ಬಸ್ಸುಗಳ ಮಾಲೀಕರ ಸಂಘದೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತೆ ಕೋರಲಾಗಿದೆ.

• ಸಾರಿಗೆ ನಿಗಮಗಳ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಈ ಖಾಸಗಿ ಬಸ್ಸುಗಳ ನಿಲುಗಡೆಗಾಗಿ ಸ್ಥಳವಕಾಶವನ್ನು ಮತ್ತು ನಿಲ್ದಾಣದಿಂದ ಕಾರ್ಯಾಚರಣೆ ಮಾಡಲು ಅವಕಾಶ ಒದಗಿಸಲಾಗಿದೆ. (ಆದೇಶ ಸಂ.ಕರಾಸಾ/ಕೇಕ/ಸಂ/ಸಾ/ಜಿ-2/81/21-22 ದಿನಾಂಕ: 06.04.2021)

• ದೂರದ ಸ್ಥಳಗಳಿಗೆ ತೆರಳಲಿರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶಗಳಿಂದ ಬೆಂಗಳೂರಿನಿಂದ ಬೆಳಗಾವಿ, ಕಲಬುರಗಿ, ಬೀದರ್, ಕಾರವಾರ, ವಿಜಯಪುರ, ಶಿವಮೊಗ್ಗ, ಮೈಸೂರು ಮುಂತಾದ ಕಡೆಗಳಿಗೆ ಹೆಚ್ಚಿನ ರೈಲು ಸಂಪರ್ಕವನ್ನು ಒದಗಿಸುವಂತೆ ಈಗಾಗಲೇ ರೇಲ್ವೆ ಇಲಾಖೆಯನ್ನು ಸಹ ಕೋರಲಾಗಿದೆ.

• ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ರೈಲುಗಳನ್ನು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಈ ಎಲ್ಲಾ ಪರ್ಯಾಯ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ಇಂತಹ ಸಂಕಷ್ಟದ ಸಮಯದಲ್ಲಿ ಸಹಕರಿಸಬೇಕೆಂದು ಸಾರಿಗೆ ಸಚಿವರು ವಿನಂತಿಸಿಕೊಂಡಿದ್ದಾರೆ ಸಾರಿಗೆ ನಿಗಮಗಳ ನೌಕರರು ಮುಷ್ಕರವನ್ನು ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಸಹ  ಸವದಿ  ಸರ್ಕಾರದ ಪರವಾಗಿ ವಿನಂತಿಸಿಕೊಂಡಿದ್ದಾರೆ

ಇದನ್ನೂ ಓದಿ: KSRTC BMTC Strike: ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧವೇ ಸಿಡಿದೆದ್ದ ಕಂಡಕ್ಟರ್​ ಉಮಾ; ಬೆದರಿಸಿ ಕೆಲಸ ಮಾಡಿಸಿದ್ದಕ್ಕೆ ಕಣ್ಣೀರಿಟ್ಟ ಸಿಬ್ಬಂದಿ ಶ್ರೀಕಾಂತ್​ ರೆಡ್ಡಿ

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ