AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಇನ್ಮುಂದೆ ದೊರೆಯಲಿದೆ. ಈ ಸಂಬಂಧ ಸರ್ಕಾರ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ನೌಕರರು ಮತ್ತು ಅವರ ಕುಟುಂಬದ ಆರು ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ನೌಕರರು ಮಾಸಿಕ 650 ರೂ. ಮತ್ತು KSRTC 600 ರೂ. ಪಾವತಿಸುತ್ತದೆ. ಈ ಯೋಜನೆಯ ಮಿತಿಗಳು ಮತ್ತು ಆಸ್ಪತ್ರೆಗಳ ಪಟ್ಟಿಯ ಮಾಹಿತಿ ಇಲ್ಲಿದೆ.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ
ಕೆಎಸ್​ಆರ್​ಟಿಸಿ ನೌಕರರು
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 06, 2025 | 1:08 PM

Share

ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಆರೋಗ್ಯ ಕಾರ್ಡ್​​ ಪ್ರಯೋಜನಗಳೇನು? ಆಸ್ಪತ್ರೆಗಳ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್​ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Mon, 6 January 25

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!