ಸಾರಿಗೆ ನೌಕರರ ಮುಷ್ಕರ ಘೋಷಣೆ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು, ಇಂದು ಮಹತ್ವದ ಸಭೆ
ವೇತನ ಹೆಚ್ಚಳ ಸೇರಿದ್ದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸಾರಿಗೆ ನೌಕರರು ಮಾರ್ಚ್ 24ರಿಂದ ಬಸ್ ಸೇವೆ ಸ್ಥಗಿತಗೊಳಿಸುವ ಮೂಲಕ ಮುಷ್ಕರಕ್ಕೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದೆ. ಈ ಹಿನ್ನೆಲೆ ಇಂದು (ಮಾ.8) ಸಂಜೆ 6:30ಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಸಾರಿಗೆ ನೌಕರರ ಮುಖಂಡರ ಸಭೆ ಕರೆದಿದ್ದಾರೆ.
ಬೆಂಗಳೂರು: ವೇತನ ಹೆಚ್ಚಳ ಸೇರಿದ್ದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಕಳೆದ ಮೂರು ವರ್ಷಗಳಿಂದ ಪ್ರತಿಭಟಿಸುತ್ತಿದ್ದಾರೆ. ಆದರೆ ಸಾರಿಗೆ ನೌಕರರ (KSRTC Employees) ಧ್ವನಿಗೆ ಸರ್ಕಾರ ಕಿವಿಗೊಡುತ್ತಿಲ್ಲ. ಈ ಹಿನ್ನೆಲೆ ಮಾರ್ಚ್ 24ರಿಂದ ಬಸ್ ಸೇವೆ ಸ್ಥಗಿತಗೊಳಿಸುವ ಮೂಲಕ ಮುಷ್ಕರಕ್ಕೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದೆ. ಈ ಹಿನ್ನೆಲೆ ಇಂದು (ಮಾ.8) ಸಂಜೆ 6:30ಕ್ಕೆ ಸಾರಿಗೆ ಸಚಿವ ಬಿ. ಶ್ರೀರಾಮುಲು (B.Sriramulu) ಸಾರಿಗೆ ನೌಕರರ ಮುಖಂಡರ ಸಭೆ ಕರೆದಿದ್ದಾರೆ. ವಿಧಾನಸೌಧ 3ನೇ ಮಹಡಿಯ ಕೊಠಡಿ ಸಂಖ್ಯೆ 313ರಲ್ಲಿ ಸಭೆ ನಡೆಯಲಿದೆ.
ಸಭೆಗೆ ಆಹ್ವಾನಿಸಲಾದ ಒಕ್ಕೂಟಗಳು
1. ಅಖಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕರ ಮಹಾಮಂಡಳಿ
2. ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ
3. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
4. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ
5. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ
ಸತತ 3 ವರ್ಷಗಳಿಂದ ಪ್ರತಿಭಟನೆ
4 ನಿನಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ, ಸಾರಿಗೆ ನೌಕರರು ಸತತ 3 ವರ್ಷಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೂ ಕೂಡ ಸರ್ಕಾರ ಮಾತ್ರ ಲಿಖಿತ ರೂಪದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲ್ಲ. ಹೀಗಾಗಿ ಮಾರ್ಚ್ 24ರಿಂದ ಬಸ್ ಸೇವೆ ಸ್ಥಗಿತಗೊಳಿಸುವ ಮೂಲಕ ಅನಿರ್ಧಾಷ್ಟಾವದಿ ಪ್ರತಿಭಟನೆ ಮಾಡಲು ನೌಕರರು ಮುಂದಾಗಿದ್ದಾರೆ.
ಇದನ್ನೂ ಓದಿ: ಕೆಎಸ್ಡಿಎಲ್ನಲ್ಲಿ ಮತ್ತೊಂದು ಭ್ರಷ್ಟಾಚಾರ, ಸರ್ಕಾರದ ಡಾಕ್ಯುಮೆಂಟ್ನಿಂದಲೇ 20 ಕೋಟಿ ರೂ. ಅಕ್ರಮ ಬಯಲಿಗೆ
2021ರಲ್ಲಿ ಲಿಖಿತ ಭರವಸೆ
ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆದರೆ 2 ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಯಾಗಿಲ್ಲ, ಮತ್ತು ಬಜೆಟ್ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಏನೂ ಹೇಳಲಾಗಿಲ್ಲ ಎಂದು ಸಾರಿಗೆ ಒಕ್ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ಹೇಳಿದ್ದರು.
ಮುಂದಿನ 6 ತಿಂಗಳು ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಸರ್ಕಾರ ಆದೇಶ
2022ರ ಡಿಸೆಂಬರ್ 29 ರಂದು ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ಕೊಟ್ಟಿತ್ತು. ಸಾರಿಗೆ ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:39 am, Wed, 8 March 23