ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 21, 2021 | 4:01 PM

ಬೆಂಗಳೂರು: ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಜಿಲ್ಲೆಗಳ ಸಾಲಿಗೆ ಹೊಸದಾಗಿ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸಲಹೆ

International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ

(KSRTC extended April month bus pass to 18 days for Karnataka Lockdown)

Published On - 3:31 pm, Mon, 21 June 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ