ಬೆಂಗಳೂರು: ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್ ಇದ್ದ ಕಾರಣ ಬಸ್ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.
ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್‌ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ
ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್‌ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್‌ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು.
ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಜಿಲ್ಲೆಗಳ ಸಾಲಿಗೆ ಹೊಸದಾಗಿ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.
ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸಲಹೆ
(KSRTC extended April month bus pass to 18 days for Karnataka Lockdown)
Published On - 3:31 pm, Mon, 21 June 21