AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!

ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಎಸ್​ಆರ್​ಟಿಸಿ ಫ್ಲೈಬಸ್ ಇಂದಿನಿಂದ ಹೊಸದೊಂದು ಕೊಡುಗಡೆಯನ್ನು ಪ್ರಯಾಣಿಕರಿಗೆ ನೀಡುತ್ತಿದೆ. ನಂದಿನಿ ಸ್ನ್ಯಾಕ್ ಕಿಟ್ ವಿತರಣೆ ಇಂದಿನಿಂದ ಶುರುವಾಗುತ್ತಿದೆ. ಏನಿದು ಕೆಎಸ್​ಆರ್​​ಟಿಸಿಯ ಹೊಸ ಯೋಜನೆ? ನಂದಿನಿ ಸ್ನ್ಯಾಕ್ ಕಿಟ್ ಕೊಡುವ ಉದ್ದೇಶವೇನು? ಇಲ್ಲಿದೆ ವಿವರ.

ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!
ಸಾಂದರ್ಭಿಕ ಚಿತ್ರ
Ganapathi Sharma
| Updated By: Digi Tech Desk|

Updated on:Nov 12, 2025 | 10:14 AM

Share

ಬೆಂಗಳೂರು, ನವೆಂಬರ್ 12: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ ಇಂದಿನಿಂದ ಕೆಎಂಎಫ್​​ (KMF) ನಂದಿನಿ ಸ್ನ್ಯಾಕ್ ಕಿಟ್ (Nandini Snack Kit) ಸಿಗಲಿದೆ! ಈ ಹೊಸ ಯೋಜನೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಇಂದು ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್​ಪೋರ್ಟ್​ಗೆ ತೆರಳುವ ಬಸ್​ಗಳಲ್ಲೂ ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ಈ ಉಪಕ್ರಮ ಆರಂಭಿಸಲಾಗುತ್ತಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್, ಅದರ ಡೈರಿ ಆಧಾರಿತ ತಿಂಡಿಗಳು ಮತ್ತು ಪಾನೀಯಗಳಿಗೆ ಇನ್ನಷ್ಟು ಪ್ರಚಾರ ದೊರೆಯುವಂತೆ ಮಾಡುವ ಮೂಲಕ ಅವುಗಳ ಉತ್ತೇಜನಕ್ಕೂ ಈ ಉಪಕ್ರಮ ಸಹ ಸಹಾಯ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂದಿನಿ ಸ್ನ್ಯಾಕ್ ಕಿಟ್​ನಲ್ಲಿ ಏನೇನಿರಲಿದೆ?

ಫ್ಲೈಬಸ್ ಪ್ರಯಾಣಿಕರಿಗೆ ನೀಡುವ ನಂದಿನಿ ಸ್ನ್ಯಾಕ್ ಕಿಟ್​ನಲ್ಲಿ ಏನೇನು ಉತ್ಪನ್ನಗಳು ಇರಲಿವೆ ಎಂಬುದನ್ನು ಕೆಎಸ್​​ಆರ್​ಟಿಸಿ ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ. ನಂದಿನಿ ಬ್ರ್ಯಾಂಡ್​ನ ಕೆಲವು ಉತ್ಪನ್ನಗಳು ಇರಲಿವೆ ಎಂದು ತಿಳಿಸಿದೆ.

ಕೆಎಸ್‌ಆರ್‌ಟಿಸಿ ಫ್ಲೈಬಸ್ ಸೇವೆಯು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೈಸೂರು, ಮಂಗಳೂರು, ಮಡಿಕೇರಿ, ಮಣಿಪಾಲ, ಉಡುಪಿ ಮತ್ತು ಕುಂದಾಪುರ ಸೇರಿದಂತೆ ಕರ್ನಾಟಕದ ಹಲವಾರು ಪ್ರಮುಖ ನಗರಗಳು ಮತ್ತು ಪಟ್ಟಣಗಳೊಂದಿಗೆ ಸಂಪರ್ಕಿಸುತ್ತದೆ.

ಕೆಎಸ್‌ಆರ್‌ಟಿಸಿ ತನ್ನ ಪ್ರೀಮಿಯಂ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತ ಬಾಟಲ್ ಕುಡಿಯುವ ನೀರನ್ನು ಈ ಹಿಂದೆ ಒದಗಿಸುತ್ತಿತ್ತು. ಆದರೆ, 2019 ರ ಅಕ್ಟೋಬರ್​​ನಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನಿಗಮವು ಏಕ-ಬಳಕೆಯ ಪ್ಲಾಸ್ಟಿಕ್ ಬಾಟಲಿಗಳನ್ನು ನೀಡುವುದನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

ದಾವಣಗೆರೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೊಸ ಫ್ಲೈಬಸ್ ಸೇವೆಗೂ ಇಂದು ಚಾಲನೆ ದೊರೆಯುತ್ತಿದೆ. ಈ ಕ್ರಮವು ಕೆಎಸ್‌ಆರ್‌ಟಿಸಿಯ ಪ್ರಯಾಣಿಕರ ಸೌಲಭ್ಯಗಳನ್ನು ಸುಧಾರಿಸುವ ಮತ್ತು ಎರಡನೇ ಸ್ತರದ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ವಿಸ್ತರಿಸುವ ದೊಡ್ಡ ಗುರಿಗೆ ಪೂರಕವಾಗಿದ ಎಂದು ಸಂಸ್ಥೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Wed, 12 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ