AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ

ಕೆಎಸ್‌ಆರ್‌ಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು. ಪ್ರವೇಶ ಪತ್ರವನ್ನು ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಇದು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಮತ್ತು ಆರ್ಥಿಕ ಹೊರೆ ಕಡಿಮೆ ಮಾಡಲು ನೆರವಾಗಲಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Feb 13, 2026 | 6:00 PM

Share

ಬೆಂಗಳೂರು, ಫೆ.13: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಯಾವುದೇ ಟಿಕೆಟ್​​ ಇಲ್ಲದೆ ಪ್ರಯಾಣಿಸಬಹುದಾಗಿದೆ ಎಂದು ನಿಗಮವು ಅಧಿಕೃತ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಈ ಉಚಿತ ಸಾರಿಗೆ ಸೌಲಭ್ಯವನ್ನು ಪಡೆಯಲು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ನಿಗಮ ಹೇಳಿದೆ.

ಪರೀಕ್ಷಾ ಪ್ರವೇಶ ಪತ್ರವನ್ನೇ ಬಸ್ ಪಾಸ್ ಎಂದು ಪರಿಗಣಿಸುವಂತೆ ಕೆಎಸ್‌ಆರ್‌ಟಿಸಿ ತನ್ನ ಎಲ್ಲಾ ಘಟಕಗಳ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದೆ. ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯಿಂದಾಗಿ ಪರೀಕ್ಷೆಗೆ ಗೈರಾಗಬಾರದು ಅಥವಾ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಹಾಕಲಾಗುವುದು. ಇದರ ಜತೆಗೆ ವಿದ್ಯಾರ್ಥಿಗಳು ಕೈ ತೋರಿಸಿದ ಕಡೆ ಬಸ್ ನಿಲ್ಲಿಸಲು ಚಾಲಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು

ಈ ಕುರಿತು ಕೆಎಸ್‌ಆರ್‌ಟಿಸಿ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಯಾವುದೇ ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಈ ನಿರ್ಧಾರವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆರ್ಥಿಕ ಹೊರೆ ತಗ್ಗಿಸಲು ಸಹಕಾರಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?