ಸಾಲು-ಸಾಲು ರಾಷ್ಟ್ರೀಯ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ

ಕೆಎಸ್​ಆರ್​ಟಿಸಿಗೆ ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ Corporate Collateral ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಹಾಗಾದ್ರೆ, ಯಾವೆಲ್ಲ ವರ್ಗಗಳಲ್ಲಿ ಪ್ರಶಸ್ತಿಗಳು ಲಭಿಸಿವೆ ಎನ್ನುವ ವಿವರ ಈ ಕೆಳಗಿನಂತಿದೆ.

ಸಾಲು-ಸಾಲು ರಾಷ್ಟ್ರೀಯ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ
ಕೆಎಸ್​ಆರ್​ಟಿಸಿ, ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 24, 2023 | 1:01 PM

ಬೆಂಗಳೂರು, (ಸೆಪ್ಟೆಂಬರ್ 24): ಕೆಎಸ್​ಆರ್​ಟಿಸಿಗೆ (Karnataka State Road Transport Corporation) ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ Corporate Collateral ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ, ನವದೆಹಲಿಯ ಪಿ.ಹೆಚ್.ಡಿ. ಚೇಂಬರ್ಸ್​ನಲ್ಲಿ ಆಯೋಜಿಸಿದ್ದ 17ನೇ ವಿಶ್ವ ಸಂವಹನ ಸಮ್ಮೇಳನ ಮತ್ತು ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾತ್ತು. ನಿಗಮದ ಪರವಾಗಿ ಕೆಎಸ್​ಆರ್​ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ಡು ಅಲೂರಿ(ಚಿಕ್ಕಬಳ್ಳಾಪುರ ವಿಭಾಗ) ಕೋಲಾರ ವಿಭಾಗದ ವಿ. ಬಸವರಾಜು, ಬೆಂಗಳೂರು ಕೇಂದ್ರೀಯ ವಿಭಾಗದ ಎಸ್. ಲಕ್ಷ್ಮಣ್ ಹಾಗೂ ಮಂಡ್ಯ ವಿಭಾಗದ ಎಸ್.ಪಿ ನಾಗರಾಜ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಬಾಂಗ್ಲಾದೇಶ ಮಾಹಿತಿ ಆಯುಕ್ತ ಗುಲಾಂ ರೆಹಮಾನ್, ಪಿ.ಆರ್.ಸಿ.ಐ ಮುಖ್ಯಸ್ಥ ಎಂ ಬಿ ಜಯರಾಂ, ಎನ್.ಎಫ್.ಎಲ್ ನಿರ್ದೇಶಕ ಬಿ.ವಿ ವಿಠ್ಠಲ್, ಸ್ವಿಜರ್ಲೆಂಡ್ ಮಾಧ್ಯಮ ಹಾಗೂ ಪತ್ರಿಕೋದ್ಯಮ ಸಂಸ್ಥೆ (IMeG) ನಿರ್ದೇಶಕ ಪ್ರೊ. ಮ್ಯಾಥ್ಯು ಹಿಬರ್ಡ್ ವಿವಿಧ ವರ್ಗಗಳಲ್ಲಿ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಾಗಾದ್ರೆ, ಯಾವೆಲ್ಲ ವರ್ಗಗಳಲ್ಲಿ ಪ್ರಶಸ್ತಿಗಳು ಲಭಿಸಿವೆ ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಕೆಎಸ್​ಆರ್​ಟಿಸಿಗೆ ದೊರೆ ಪ್ರಶಸ್ತಿಗಳು

1. ವರ್ಷದ ಅತ್ಯುತ್ತಮ ಗ್ರಾಹಕ ಸ್ನೇಹಿ ಸಂಸ್ಥೆ- ಡೈಮಂಡ್ ಪ್ರಶಸ್ತಿ

2. ಅತ್ಯುತ್ತಮ ವರ್ಷದ ಸೇವಾ ಉಪಕ್ರಮ – ಡೈಮಂಡ್ ಪ್ರಶಸ್ತಿ

3. ಸಾಂಸ್ಥಿಕ ಹಾಗೂ ವ್ಯಾವಹಾರಿಕ ಸಂಪರ್ಕ ಉಪಕ್ರಮ- ಡೈಮಂಡ್ ಪ್ರಶಸ್ತಿ

4. ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ- ಬೆಳ್ಳಿ ಪ್ರಶಸ್ತಿ

5. ವಿವಿಧತೆ ಹಾಗೂ ಸಮಾನತೆಯ ಉತ್ತಮ ಉಪಕ್ರಮ- ಬೆಳ್ಳಿ ಪ್ರಶಸ್ತಿ

6. ಅತ್ಯುತ್ತಮ ವರ್ಷದ ಉಪಕ್ರಮ ಉತ್ಪನ್ನ- ಬೆಳ್ಳಿ ಪ್ರಶಸ್ತಿ

7. ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ- ಕಂಚಿನ ಪ್ರಶಸ್ತಿ

8. ಸಾರ್ವಜನಿಕ ಸಂಪರ್ಕ ಅಧ್ಯಯನ- ಕಂಚಿನ ಪ್ರಶಸ್ತಿ

9. ಪ್ರಾದೇಶಿಕ ಆಂತರಿಕ ನಿಯತಕಾಲಿಕ ಮುದ್ರಣ- ಸಮಾಧಾನಕರ ಪ್ರಶಸ್ತಿ.

ಬಿ.ಎಂ.ಟಿ.ಸಿಗೆ ಒಲಿದ ಪ್ರಶಸ್ತಿಗಳು

ಬಿಎಂಟಿಸಿಗೆ ಈ ಕೆಳಕಂಡ 4 ವರ್ಗಗಳಲ್ಲಿ ಪ್ರಶಸ್ತಿ ಲಭಿಸಿದ್ದು, ಸಂಸ್ಥೆಯ ಪರವಾಗಿ ಪಶ್ಚಿಮ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ಎನ್, ಪ್ರಶಸ್ತಿಯನ್ನು ಸ್ವೀಕರಿಸಿದರು.

1.ಸಾಂಸ್ಥಿಕ ಕೈಪಿಡಿ ( Corporate Broucher)- ಡೈಮಂಡ್ ಪ್ರಶಸ್ತಿ

2.ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ- ಚಿನ್ನದ ಪ್ರಶಸ್ತಿ

3.ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ- ಬೆಳ್ಳಿ ಪ್ರಶಸ್ತಿ

4.ವರ್ಷದ ಅತ್ಯುತ್ತಮ ಸೃಜನಶೀಲ ಜಾಹೀರಾತು-ಕಂಚಿನ ಪ್ರಶಸ್ತಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ