ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ

|

Updated on: Aug 14, 2023 | 11:45 AM

ಕರ್ನಾಟಕ ಸಾರಿಗೆ ಸಂಸ್ಥೆ ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ
ಕೆಎಸ್​ಆರ್​​ಟಿಸಿ
Follow us on

ಬೆಂಗಳೂರು (ಆ.14): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (RTC) ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳಲ್ಲಿ ಪ್ಯಾನಿಕ್ ಬಟನ್ (Panic Button) ಮತ್ತು ಜಿಪಿಎಸ್ (GPS) ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರು ಒಮ್ಮೆ ಪ್ಯಾನಿಕ್ ಬಟನ್ ಒತ್ತಿದರೇ, ಕೆಎಸ್‌ಆರ್‌ಟಿಸಿಯ ಕೇಂದ್ರೀಕೃತ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುತ್ತದೆ. ಆಗ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸಿಬ್ಬಂದಿ ಜಿಪಿಎಸ್ ಮೂಲಕ ಬಸ್​​ ಸ್ಥಳವನ್ನು ಟ್ರ್ಯಾಕ್ ಮಾಡುತ್ತಾರೆ. ನಂತರ ಹತ್ತಿರದ ಪೊಲೀಸ್​​ ಠಾಣೆಗೆ ಮಾಹಿತಿ ನೀಡುತ್ತಾರೆ.

ಕೇಂದ್ರೀಕೃತ ನಿಯಂತ್ರಿತ ಕೊಠಡಿ, ಪ್ಯಾನಿಕ್ ಬಟನ್ ಮತ್ತು ರಿಯಲ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 30.74 ಕೋಟಿ ರೂ. ಒಪ್ಪಿಗೆ ದೊರೆತಿದೆ. ಈ ವ್ಯವಸ್ಥೆಯಿಂದ ನಿಯಂತ್ರಣ ಕೊಠಡಿಯಲ್ಲಿ ಕುಳಿತು, ನಾವು ಬಸ್ ಇರುವ ಸ್ಥಳ, ಬಸ್ ಹೋಗುವ ವೇಗವನ್ನು ತಿಳಿಯಬಹುದು ಎಂದು ಕೆಸ್​ಆರ್​ಟಿಸಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC: ಕೆಎಸ್​ಆರ್​ಟಿಸಿ ಹಳೆಯ ಬಸ್​​​ಗಳಿಗೆ ಮರುಜೀವ; ಹೊಚ್ಚಹೊಸದಾಗಿ ರಸ್ತೆಗಿಳಿಯಲಿವೆ 500 ಬಸ್​ಗಳು!

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ಕೆಎಸ್‌ಆರ್‌ಟಿಸಿಯ ಪ್ರೀಮಿಯಂ ಮತ್ತು ಪ್ರೀಮಿಯಂ ಅಲ್ಲದ ಎಲ್ಲ 8,000 ಬಸ್‌ಗಳು ಪ್ಯಾನಿಕ್ ಬಟನ್‌ ಮತ್ತು ಜಿಪಿಎಸ್ ಸೌಲಭ್ಯವನ್ನು ಅಳವಡಿಸಲಾಗುವುದು. ಈ ಯೋಜನೆಗೆ ಮೂರನೇ ಎರಡರಷ್ಟು ವೆಚ್ಚ (ಮುಕ್ಕಾಲು ಭಾಗ) ಕೇಂದ್ರ ಸರ್ಕಾರ ಮತ್ತು ಮೂರನೇ ಒಂದು (ಕಾಲುಭಾಗ) ವೆಚ್ಚವನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ. ಬೆಂಗಳೂರಿನಲ್ಲಿ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ