AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕುಟುಂಬದ ಆರ್ಥಿಕ ಭದ್ರತೆಗೆ ಕೆಎಸ್​ಆರ್​ಟಿಸಿ ಕ್ರಮ: ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಹೆಚ್ಚಳ

KSRTC Kutumba Kalyana Scheme: ಪರಿಷ್ಕೃತ ಆದೇಶವು 01.11.2023 ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಸಿಬ್ಬಂದಿ ಕುಟುಂಬದ ಆರ್ಥಿಕ ಭದ್ರತೆಗೆ ಕೆಎಸ್​ಆರ್​ಟಿಸಿ ಕ್ರಮ: ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಹೆಚ್ಚಳ
ಕೆಎಸ್​ಆರ್​ಟಿಸಿ ಬಸ್
TV9 Web
| Edited By: |

Updated on:Oct 30, 2023 | 8:51 PM

Share

ಬೆಂಗಳೂರು, ಅಕ್ಟೋಬರ್ 30: ಸಿಬ್ಬಂದಿಯ ಕುಟುಂದವರ ಆರ್ಥಿಕ ಭದ್ರತೆಗೆ ಖಾತರಿ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕುಟುಂಬ ಕಲ್ಯಾಣ ಯೋಜನೆಯಡಿ (Kutumba Kalyana Scheme) ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಂಥ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕೆಎಸ್​ಆರ್​​ಟಿಸಿಯಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಯೋಜನೆ ಈಗಾಗಲೇ ಕೆಎಸ್​ಆರ್​ಟಿಸಿಯಲ್ಲಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಂಸ್ಥೆ ಹೇಳಿದೆ.

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ, ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು 3 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು 3 ಲಕ್ಷ ರೂಪಾಯಿಯಿಂದ 10 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ 7 ಲಕ್ಷ ರೂ.ಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗಲಿದೆ.

ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟು ಮಟ್ಟಿಗೆ ಆರ್ಥಿಕವಾಗಿ ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: 8 ವರ್ಷಗಳ ಬಳಿಕ ಕರ್ನಾಟಕ ಸಾರಿಗೆ ನಿಗಮಗಳಲ್ಲಿ ನೇಮಕಾತಿ ಆರಂಭ

ಯೋಜನೆಗಾಗಿ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ಇರುವ 100 ರೂ.ಗಳಿಂದ 200 ರೂ. ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು 100 ರೂ. ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ.

ಪರಿಷ್ಕೃತ ಆದೇಶವು 01.11.2023 ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸಲಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 30 October 23