ಶ್ರೀಘ್ರದಲ್ಲೇ ರಸ್ತೆಗೆ ಇಳಿಯಲಿದೆ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್​, ಇಲ್ಲಿದೆ ವಿಶೇಷತೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆಗಾಗ ಹೊಸ ಬಸ್​ಗಳನ್ನು ರಸ್ತೆಗೆ ಇಳಿಸುತ್ತಿರುತ್ತದೆ. ಇದೀಗ ಕೆಎಸ್​ಆರ್​ಟಿಸಿ ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಶೀಘ್ರದಲ್ಲೇ ರಸ್ತೆಗೆ ಇಳಿಸಲಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್​ ಪರಿವೀಕ್ಷಣೆ ನೆಡೆಸಿದರು.

ಶ್ರೀಘ್ರದಲ್ಲೇ ರಸ್ತೆಗೆ ಇಳಿಯಲಿದೆ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್​, ಇಲ್ಲಿದೆ ವಿಶೇಷತೆ
ಕೆಎಸ್​ಆರ್​ಟಿಸಿ ವೋಲ್ವೋ ಹೊಸ ಬಸ್​​
Follow us
ವಿವೇಕ ಬಿರಾದಾರ
|

Updated on: Jul 06, 2024 | 7:39 AM

ಬೆಂಗಳೂರು, ಜುಲೈ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಯ ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು (ಜು.06) ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು.

ಬಸ್ಸಿನ ವಿಶೇಷತೆಗಳು

ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನ ತಂತ್ರಜ್ಞಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.

ಒಟ್ಟಾರೆ ಬಸ್ಸಿನ ಉದ್ದದಲ್ಲಿ ಶೇ3.5 ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ. ಒಟ್ಟಾರೆ ಬಸ್ಸಿನ ಎತ್ತರದಲ್ಲಿ ಶೇ 5.6 ರಷ್ಟು ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ.

ವಿಂಡ್‌ಶೀಲ್ಡ್ ಗಾಜು ಶೇ 9.5 ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ. ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಯೂ ಇನ್ಮುಂದೆ ಕ್ಯಾಶ್​ಲೆಸ್: ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸುವ ವ್ಯವಸ್ಥೆ ಶೀಘ್ರ ಜಾರಿ

USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ. ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.

ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ. ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.

ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ. ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.

ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ. ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.

ಸಚಿವ ರಾಮಲಿಂಗಾರೆಡ್ಡಿ ಬಸ್ಸನ್ನು ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್