2000 ಚಾಲಕ-ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ಕೆಎಸ್​ಆರ್​ಟಿಸಿ ನೇಮಕಾತಿ ಪತ್ರ: ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ

ಕೆಎಸ್​ಆರ್​ಟಿಸಿ 2000 ಚಾಲಕ-ಕಂ-ನಿರ್ವಾಹಕರನ್ನು ನೇಮಕ ಮಾಡಿದೆ. ನೇಮಕಾತಿ ಪಾರದರ್ಶಕವಾಗಿದ್ದು, ಅರ್ಹತಾ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಹೊಸದಾಗಿ ನೇಮಕಗೊಂಡವರು ಸಂಸ್ಥೆಯನ್ನು ಉತ್ತಮವಾಗಿ ನಿರ್ವಹಿಸಲು ಮತ್ತು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ನೇಮಕಾತಿ ಪತ್ರ ವಿತರಣೆ ಬಳಿಕ ಸಚಿವರು ತಿಳಿಸಿದರು.

2000 ಚಾಲಕ-ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ಕೆಎಸ್​ಆರ್​ಟಿಸಿ ನೇಮಕಾತಿ ಪತ್ರ: ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ 51 ಮಂದಿ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದರು.

Updated on: Jun 17, 2025 | 1:59 PM

ಬೆಂಗಳೂರು, ಜೂನ್ 17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) 2000 ಚಾಲಕ-ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ಮಂಗಳವಾರ ನೇಮಕಾತಿ ಪತ್ರ ವಿತರಣೆ ಮಾಡಿದೆ. ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) 51 ಮಂದಿ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದರು. ನಂತರ ಮಾತನಾಡಿದ ಸಚಿವರು, ಚಾಲನಾ ಸಿಬ್ಬಂದಿಯ ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇರುವುದಿಲ್ಲ. ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.

ನೂತನವಾಗಿ ನೇಮಕಗೊಂಡವರಿಗೆ ಸಾರಿಗೆ ಸಚಿವರು ಶುಭಹಾರೈಸಿದ್ದಾರೆ. ಇದರೊಂದಿಗೆ, ಸುಮಾರು 8 ವರ್ಷಗಳ ನಂತರ ಕೆಎಸ್​ಆರ್​ಟಿಸಿಯಲ್ಲಿ ನೇಮಕಾತಿ ನಡೆಸಿದಂತಾಗಿದೆ.

ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ‌ನಿರ್ವಹಿಸಬೇಕು. ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಚಿರು ಸೂಚನೆ ನೀಡಿದರು. ಅಪಘಾತವು ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.
ನಿಗಮವು ಕರೋನಾ ನಂತರ ಹಲವು ಅಡತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದ್ದು, ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿರುತ್ತದೆ. ನೌಕರರು ಹಾಗೂ ಅವರ ಅವಲಂಭಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಮಂತ್ರಾಲಯ: ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಶಿರಾಡಿ ಘಾಟ್, ಹಲವೆಡೆ ಭೂಕುಸಿತ: ಬೆಂಗಳೂರು ಮಂಗಳೂರು ಪ್ರಯಾಣಕ್ಕೆ ಸಂಚಕಾರ
ಕರ್ನಾಟಕಕ್ಕೂ ತಟ್ಟಲಿದೆಯಾ ಇರಾನ್, ಇಸ್ರೇಲ್ ಸಂಘರ್ಷದ ಪರಿಣಾಮ?

ನಾಲ್ಕು ಸಾರಿಗೆ ನಿಗಮಗಳು 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ರೂ.ಗಳ ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದಾರೆ, ಹೀಗಾಗಿ ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿತ್ತು. ಮಾನ್ಯ ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುತ್ತಾರೆ. ಚಾಲನಾ ಸಿಬ್ಬಂದಿ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ