AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗೆ ಇಳಿದ KSRTCಯ ಅಂಬಾರಿ ಉತ್ಸವ ಸ್ಲೀಪರ್ ಬಸ್: ಏನು ವಿಶೇಷತೆ, ಯಾವ್ಯಾವ ನಗರಕ್ಕೆ ಸಂಪರ್ಕ? ಇಲ್ಲಿದೆ ಮಾಹಿತಿ​

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಲ್ಲಿ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿತು. ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಅವರು ಬಸ್‌ಗಳಿಗೆ ಚಾಲನೆ ನೀಡಿದರು. ಈ ಬಸ್‌ಗಳು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಂತರರಾಜ್ಯಗಳಿಗೆ ಸಂಚರಿಸಲಿವೆ. ಸರ್ಕಾರ 9000 ನೌಕರರ ನೇಮಕಾತಿಗೆ ಅನುಮತಿ ನೀಡಿದ್ದು, 750 ವಿದ್ಯುತ್ ಬಸ್‌ಗಳ ಯೋಜನೆಗೂ ಅನುಮೋದನೆ ನೀಡಿದೆ.

ರಸ್ತೆಗೆ ಇಳಿದ KSRTCಯ ಅಂಬಾರಿ ಉತ್ಸವ ಸ್ಲೀಪರ್ ಬಸ್: ಏನು ವಿಶೇಷತೆ, ಯಾವ್ಯಾವ ನಗರಕ್ಕೆ ಸಂಪರ್ಕ? ಇಲ್ಲಿದೆ ಮಾಹಿತಿ​
ಅಂಬಾರಿ ಉತ್ಸವ ಸ್ಲೀಪರ್ ಬಸ್‌
Kiran Surya
| Edited By: |

Updated on: Dec 24, 2024 | 12:31 PM

Share

ಬೆಂಗಳೂರು, ಡಿಸೆಂಬರ್​ 24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್​ಗಳು (Ambari Utsav Sleeper Buses) ಸೇರ್ಪಡೆಗೊಂಡಿದ್ದು, ಇಂದಿನಿಂದಲೇ (ಡಿ.24) ರಸ್ತೆಗೆ ಇಳಿದಿವೆ. 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಎರಡು ತಿಂಗಳ ಮುಂಚೆ ವೋಲ್ವೋ 20 ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

9 ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ನಲ್ಕೂ ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿವೆ. 750 ವಿದ್ಯುತ್​ ಚಾಲಿತ ಬಸ್​ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್​ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದರೇ ಇನ್ನಷ್ಟು ಬಸ್​ಗಳನ್ನ ರಸ್ತೆಗಿಳಿಸುತ್ತೇವೆ ಎಂದರು.

ಅಂಬಾರಿ ಉತ್ಸವ ಸೀಪ್ಲರ್ ವಿಶೇಷತೆ

  • ಅಂಬಾರಿ ಉತ್ಸವ ಸೀಪ್ಲರ್ ಬಸ್​ಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತವೆ.
  • ಇದು ಶಕ್ತಿಯುತ ಹಾಲೋಜನ್ ಹೆಡ್​ಲೈಟ್‌ಗಳು ಮತ್ತು ಬೆಳಿಗನ ಸಮಯದಲ್ಲಿ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿವೆ.
  • ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎರಿಯರ್ಸ್ ಹೊಂದಿವೆ. ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್​ ಅನ್ನು ನೀಡುತ್ತದೆ.
  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ.
  • ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತವೆ.
  • ಬಸ್ ಮುಂಭಾಗದ ಗಾಜು 9.5% ಅಗಲವಾಗಿವೆ.
  • ಯು.ಎಸ್.ಬಿ ಮತ್ತು C-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಲಾಗಿದೆ.
  • ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಮಾಡಲಾಗಿದೆ.
  • ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ.
  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.
  • ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳ ಅಳವಡಿಸಲಾಗಿದೆ.
  • ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.
  • ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.
  • ಚಾಲಕರು, ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾಗಿದೆ.

ಸದ್ಯ ಎಲ್ಲೆಲ್ಲಿ ಸಂಚಾರ

  • ಕುಂದಾಪುರ-ಬೆಂಗಳೂರು ಮಧ್ಯೆ 2 ಬಸ್​ಗಳು ಸಂಚರಿಸುತ್ತವೆ.
  • ಮಂಗಳೂರು-ಬೆಂಗಳೂರು ಮಧ್ಯೆ 2 ಬಸ್​ಗಳು
  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕುಂದಾಪುರ ನಡುವೆ 2 ಬಸ್​ಗಳು
  • ಬೆಂಗಳೂರು-ನೆಲ್ಲೂರು ನಡುವೆ 2 ಬಸ್​ಗಳು
  • ಬೆಂಗಳೂರು-ಹೈದಾರಬಾದ್ ನಡುವೆ 2 ಬಸ್​ಗಳು
  • ಬೆಂಗಳೂರು-ವಿಜಯವಾಡ ನಡುವೆ 4 ಬಸ್​ಗಳು
  • ಬೆಂಗಳೂರು-ಎರ್ನಾಕುಲಂ ನಡುವೆ 2 ಬಸ್​ಗಳು
  • ಬೆಂಗಳೂರು-ತ್ರಿಶೂರು ನಡುವೆ 2 ಬಸ್​ಗಳು
  • ಬೆಂಗಳೂರು-ಕಲ್ಲಿಕೋಟೆ ನಡುವೆ 2 ಬಸ್​ಗಳು ಸಂಚರಿಸಲಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ