KSRTC Logo: ನಮ್ಮ ಕೆಎಸ್​ಆರ್​ಟಿಸಿಯಿಂದ ಕೇರಳದ ಸಾರಿಗೆಗೆ ನಷ್ಟವೇನಿಲ್ಲ, ನಾವು ಪ್ರತಿಸ್ಪರ್ಧಿಗಳೂ ಅಲ್ಲ; ವಿವಾದ ಅನಗತ್ಯ ಎಂದ ಲಕ್ಷ್ಮಣ ಸವದಿ

ಇದು ಕೇರಳಕ್ಕೆ ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಎಂಬ ಹೆಸರಿದ್ದರೆ ಅದರಿಂದ ಕೇರಳ ರಾಜ್ಯದ ಕೆಎಸ್​ಆರ್​ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು.

KSRTC Logo: ನಮ್ಮ ಕೆಎಸ್​ಆರ್​ಟಿಸಿಯಿಂದ ಕೇರಳದ ಸಾರಿಗೆಗೆ ನಷ್ಟವೇನಿಲ್ಲ, ನಾವು ಪ್ರತಿಸ್ಪರ್ಧಿಗಳೂ ಅಲ್ಲ; ವಿವಾದ ಅನಗತ್ಯ ಎಂದ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
Follow us
TV9 Web
| Updated By: Skanda

Updated on: Jun 03, 2021 | 12:29 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಳಸುತ್ತಿದ್ದ ಕೆಎಸ್​ಆರ್​ಟಿಸಿ ಎಂಬ ಟ್ರೇಡ್​ಮಾರ್ಕ್​ ಕೇರಳದ ಪಾಲಾಗಿರುವ ಬಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾತನಾಡಿದ್ದಾರೆ. ಕೇರಳ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಎರಡರಲ್ಲೂ ಕೆಎಸ್​ಆರ್​ಟಿಸಿ ಎಂದೇ ಬಳಸಲಾಗುತ್ತಿತ್ತು. ಈಗ ಕೇರಳ ರಾಜ್ಯವು ಕೆಎಸ್​ಆರ್​ಟಿಸಿ ಎಂಬ ಶಬ್ದವನ್ನು ತಾನೇ ಮೊದಲು ಬಳಸಿದ್ದರಿಂದ ಕರ್ನಾಟಕ ಅದನ್ನು ಬಳಸಕೂಡದು ಎಂದು ತಕರಾರು ತೆಗೆದ ಕಾರಣ ಆ ಬಗ್ಗೆ ಟ್ರೇಡ್ ಮಾರ್ಕ್​ ರಿಜಿಸ್ಟ್ರಾರ್ ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ, ತೀರ್ಪಿನಲ್ಲಿ ಏನಿದೆ ಎಂಬ ಅಂಶ ನಮಗೆ ಅಧಿಕೃತವಾಗಿ ಇನ್ನೂ ಸಿಕ್ಕಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್​ಮಾರ್ಕ್​ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ, ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಕೇರಳಕ್ಕೆ ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಎಂಬ ಹೆಸರಿದ್ದರೆ ಅದರಿಂದ ಕೇರಳ ರಾಜ್ಯದ ಕೆಎಸ್​ಆರ್​ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೆಎಸ್​​ಆರ್​ಟಿಸಿ ಹೆಸರಿನಲ್ಲಿ ಕರ್ನಾಟಕ ಹಾಗೂ ಕೇರಳದ ಸಾರಿಗೆ ಬಸ್​ಗಳು ಸಂಚರಿಸುತ್ತಿದ್ದವು. ನಮ್ಮಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಂದೂ, ಅಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವೆಂದೂ ಕರೆಯಲ್ಪಡುತ್ತಿತ್ತು. ಎರಡೂ ರಾಜ್ಯದ ಸಾರಿಗೆ ಬಸ್​ಗಳು ಕೆಎಸ್ಆರ್​ಟಿಸಿ ಎಂಬ ಒಂದೇ ಟ್ರೇಡ್​​​ ಮಾರ್ಕ್ ಬಳಸುತ್ತಿದ್ದವು. ಆದರೆ, 2014ರಲ್ಲಿ ಈ ಟ್ರೇಡ್ ಮಾರ್ಕ್ ಬಳಸದಂತೆ ಕೇರಳಕ್ಕೆ ಕರ್ನಾಟಕ ಸೂಚನೆ ನೀಡಿತ್ತು. ಈ ಬಗ್ಗೆ ಕೇರಳಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು.

ಕೇರಳ ಸರ್ಕಾರ ಆ ಸಂದರ್ಭ ಟ್ರೇಡ್ ಮಾರ್ಕ್​ಗಳ ರಿಜಿಸ್ಟ್ರಾರ್​​ಗೆ ಅರ್ಜಿ ಸಲ್ಲಿಸಿತ್ತು. ಸುದೀರ್ಘ 8 ವರ್ಷಗಳಿಂದ ಈ ಬಗ್ಗೆ ಕಾನೂನು ಹೋರಾಟ ನಡೆದಿತ್ತು. ಕೊನೆಗೆ ಅಂತಿಮವಾಗಿ ಕೇರಳಕ್ಕೆ KSRTC ಟ್ರೇಡ್​ಮಾರ್ಕ್ ಲಭಿಸಿದೆ. ಕೆಎಸ್​​ಆರ್​ಟಿಸಿ ಟ್ರೇಡ್ ​​ಮಾರ್ಕ್ ಕೇರಳ ರಾಜ್ಯಕ್ಕೆ ಒಲಿದ ಬಗ್ಗೆ ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: KSRTC Logo: ಕರ್ನಾಟಕದ ಕೈ ತಪ್ಪಿದ ಕೆಎಸ್​​ಆರ್​ಟಿಸಿ ಲೋಗೊ, ಕೇರಳ ಪಾಲು; ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ