AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!

ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!
ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತಾ ಸಾಗುತ್ತಿರುವ ಮೆಕ್ಯಾನಿಕ್ ನಾಗೇಶ್
preethi shettigar
| Updated By: KUSHAL V|

Updated on:Dec 13, 2020 | 4:18 PM

Share

ಉಡುಪಿ: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಡಿಪೋದ ಮೆಕ್ಯಾನಿಕ್ ನಾಗೇಶ್ ಬೋವಿ KSRTC ಬಸ್ ನಿಲ್ದಾಣದಿಂದ ಶ್ರೀಕೃಷ್ಣ ಮಠದವರೆಗೆ ದೀರ್ಘದಂಡ ನಮಸ್ಕಾರ ಮಾಡಿ ಪ್ರತಿಭಟನೆ ನಡೆಸಿದರು. ಅಂದ ಹಾಗೆ, ನಾಗೇಶ್​ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ಮಾಡಲು ಪೊಲೀಸರ ಬಳಿ ಅನುಮತಿ ಕೋರಿದ್ದರು. ಆದರೆ, ನಗರ ಠಾಣೆಯ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರಿಂದ ದೇವರ ಮೊರೆಹೋಗುವ ಮೂಲಕ ನಾಗೇಶ್ ಬೋವಿ ತಮ್ಮ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತ ಪ್ರತಿಭಟನೆ ನೆರವೇರಿಸಿದರು.

ನೀರು ಪ್ರೋಕ್ಷಣೆ ಮಾಡಿಕೊಳ್ಳುತ್ತಿರುವ ನಾಗೇಶ್

ರಸ್ತೆ ಉದ್ದಕ್ಕೂ ದೀರ್ಘದಂಡ ನಮಸ್ಕಾರ ಹಾಕಿದ ಮ್ಯಾಕಾನಿಕ್.

ಉಡುಪಿಯ ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ.

ಉಡುಪಿ ಶ್ರೀ ಕೃಷ್ಣ ಮಠದ ಮುಂದೆ ಮ್ಯಾಕಾನಿಕ್ ನಾಗೇಶ್.

ಉಡುಪಿ ಬಸ್ ನಿಲ್ದಾಣದಿಂದ ಪ್ರಾರಂಭವಾದ ದೀರ್ಘದಂಡ ನಮಸ್ಕಾರ.

ನೆಲಮಂಗಲ ಟೋಲ್ ಬಳಿ ರೊಚ್ಚಿಗೆದ್ದ ಕಾರ್ಮಿಕರು: KSRTC ಬಸ್​ಗೆ ಅಡ್ಡ ಹಾಕಿ, ಆಕ್ರೋಶ

Published On - 3:29 pm, Sun, 13 December 20

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್