AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ

KSRTC Bus Ticket Price: ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ
ಡಿಸಿಎಂ ಲಕ್ಷ್ಮಣ ಸವದಿ
TV9 Web
| Updated By: ganapathi bhat|

Updated on:Jul 06, 2021 | 2:52 PM

Share

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು (ಜುಲೈ 6) ಸ್ಪಷ್ಟನೆ ನೀಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ, ಕೊವಿಡ್ ಸಂಕಷ್ಟ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ದರ ಏರಿಕೆ ಇಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡ್ತಿಲ್ಲ ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ, ಸಾರಿಗೆ ನೌಕರರ ಮುಷ್ಕರ ವಿಚಾರವಾಗಿಯೂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. ಅವುಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ. ಸಾರಿಗೆ ನೌಕರರು ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಆದರೆ, ಲಾಕ್‌ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂಪಾಯಿ ನಷ್ಟ ಆಗಿದೆ‌ ಎಂದು ಅವರು ವಿವರಣೆ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಪಾಡಲು ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇದೆ. ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಕೆಲ ಶಾಸಕರ ವೈಯಕ್ತಿಕ ಅಭಿಪ್ರಾಯ ಅಷ್ಟೇ ಎಂದು ಹೇಳಿದ್ದಾರೆ. ಆದರೆ ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷದ ಅಭಿಪ್ರಾಯ ಅಲ್ಲ ಎಂದು ಸವದಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನ ಸಂಪರ್ಕಿಸಿದ ಪುತ್ರ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ಚಿದಾನಂದ ಸವದಿ ಕಾರು ಚಾಲನೆ ಮಾಡುತ್ತಿರಲಿಲ್ಲ: ಬಾಗಲಕೋಟೆ ಎಸ್​ಪಿ ಪ್ರತಿಕ್ರಿಯೆ

Published On - 2:48 pm, Tue, 6 July 21

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು