AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಸಿಬ್ಬಂದಿ ನಿರ್ಲಕ್ಷ್ಯ: ಪರೀಕ್ಷಾರ್ಥಿಗಳ ಕನಸು ನುಚ್ಚುನೂರು

ಗದಗ: KSRTC ಸಿಬ್ಬಂದಿಯ ನಿರ್ಲಕ್ಷ್ಯದಿಂದ 40 ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂದು ಕಲಬುರಗಿ ನಗರದಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆ ಇತ್ತು. ಹೀಗಾಗಿ ಗದಗದಿಂದ ಕಲಬುರಗಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಬೇಕಾಗಿತ್ತು. ಆದ್ರೆ KSRTC ಬಸ್ ಸೌಲಭ್ಯ ಕಲ್ಪಿಸಿಲ್ಲ. ಕಲಬುರಗಿಗೆ ಹೆಚ್ಚುವರಿ ಬಸ್ ಒದಗಿಸುವಂತೆ KSRTC ಸಿಬ್ಬಂದಿಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಆದ್ರೆ ಪರೀಕ್ಷಾರ್ಥಿಗಳ ಮನವಿಗೆ KSRTC ಇಲಾಖೆ ಸ್ಪಂದಿಸಿಲ್ಲ. ರಾಜಹಂಸ ಬಸ್ ತಡೆದು ಗಲಾಟೆ: ಗದಗದಿಂದ ಯಾದಗಿರಿಗೆ ಹೊರಟ್ಟಿದ ರಾಜಹಂಸ ಬಸ್​ ಅನ್ನು ಅರ್ಧಗಂಟೆಗೂ ಹೆಚ್ಚು ಕಾಲ […]

KSRTC ಸಿಬ್ಬಂದಿ ನಿರ್ಲಕ್ಷ್ಯ: ಪರೀಕ್ಷಾರ್ಥಿಗಳ ಕನಸು ನುಚ್ಚುನೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 10:51 AM

Share

ಗದಗ: KSRTC ಸಿಬ್ಬಂದಿಯ ನಿರ್ಲಕ್ಷ್ಯದಿಂದ 40 ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂದು ಕಲಬುರಗಿ ನಗರದಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆ ಇತ್ತು. ಹೀಗಾಗಿ ಗದಗದಿಂದ ಕಲಬುರಗಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಬೇಕಾಗಿತ್ತು. ಆದ್ರೆ KSRTC ಬಸ್ ಸೌಲಭ್ಯ ಕಲ್ಪಿಸಿಲ್ಲ.

ಕಲಬುರಗಿಗೆ ಹೆಚ್ಚುವರಿ ಬಸ್ ಒದಗಿಸುವಂತೆ KSRTC ಸಿಬ್ಬಂದಿಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಆದ್ರೆ ಪರೀಕ್ಷಾರ್ಥಿಗಳ ಮನವಿಗೆ KSRTC ಇಲಾಖೆ ಸ್ಪಂದಿಸಿಲ್ಲ.

ರಾಜಹಂಸ ಬಸ್ ತಡೆದು ಗಲಾಟೆ: ಗದಗದಿಂದ ಯಾದಗಿರಿಗೆ ಹೊರಟ್ಟಿದ ರಾಜಹಂಸ ಬಸ್​ ಅನ್ನು ಅರ್ಧಗಂಟೆಗೂ ಹೆಚ್ಚು ಕಾಲ ತಡೆದು, ಕಲಬುರಗಿ ಬಸ್ ಸೌಲಭ್ಯ ನೀಡುವವರೆಗೂ ಈ ಬಸ್ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬಳಿಕ ಗದಗ ಹೊಸ ಬಸ್ ನಿಲ್ದಾಣದ ಮ್ಯಾನೇಜರ್​ರನ್ನು ಪರೀಕ್ಷಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕರು, ಜಿಲ್ಲಾಧಿಕಾರಿ ಮಾತಿಗೂ ಬೆಲೆ ಇಲ್ಲ: ಸ್ಥಳಕ್ಕೆ ಭೇಟಿ ನೀಡಿದ ಬೆಟಗೇರಿ ಬಡಾವಣೆ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ಪಟ್ಟು ಬಿಡದ ಪರೀಕ್ಷಾರ್ಥಿಗಳು ಶಾಸಕ ಹೆಚ್.ಕೆ.ಪಾಟೀಲ್​ಗೆ ಕರೆ ಮಾಡಿದ್ದಾರೆ. ಬಳಿಕ ಶಾಸಕರು ಮತ್ತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಮಾತಿಗೂ ಕೆಎಸ್​ಆರ್​ಟಿಸಿ ಅಧಿಕಾರಿಗಳು ಬೆಲೆ ನೀಡಿಲ್ಲ ಎನ್ನಲಾಗಿದೆ. ಮಧ್ಯರಾತ್ರಿ 1 ಗಂಟೆ ಬಳಿಕ ಬಸ್ ಇಲ್ಲದೇ ಪರೀಕ್ಷಾರ್ಥಿಗಳು ವಾಪಸ್ ಆಗಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ