AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್ ಬೆದರಿಕೆ ಬೆನ್ನಲ್ಲೇ ಕೆಎಸ್​ಆರ್​ಟಿಸಿ ಅಧಿಕಾರಿಗಳು ಅಲರ್ಟ್: ಅಂಬಾರಿ ಉತ್ಸವ ಬಸ್​ನಲ್ಲಿ ಹೇಗಿದೆ ಸುರಕ್ಷತಾ ಕ್ರಮ?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಸಿಎಂ, ಡಿಸಿಎಂ, ಗೃಹ ಸಚಿವರು ಸೇರಿದಂತೆ ಹಲವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಇದೇ ಸಂದರ್ಭದಲ್ಲಿ ಕೆಎಸ್​​ಆರ್​​ಟಿಸಿಯ ಅಂಬಾರಿ ಉತ್ಸವ ಬಸ್ಸಿಗೆ ಕೂಡ ಬಾಂಬ್ ಬೆದರಿಕೆ ಸಂದೇಶ ಬಂದಿರುವುದರಿಂದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಅಂಬಾರಿ ಉತ್ಸವ ಬಸ್ಸಿನಲ್ಲಿ ಏನೇನು ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಾಂಬ್ ಬೆದರಿಕೆ ಬೆನ್ನಲ್ಲೇ ಕೆಎಸ್​ಆರ್​ಟಿಸಿ ಅಧಿಕಾರಿಗಳು ಅಲರ್ಟ್: ಅಂಬಾರಿ ಉತ್ಸವ ಬಸ್​ನಲ್ಲಿ ಹೇಗಿದೆ ಸುರಕ್ಷತಾ ಕ್ರಮ?
ಅಂಬಾರಿ ಉತ್ಸವ ಬಸ್ (ಸಂಗ್ರಹ ಚಿತ್ರ)
TV9 Web
| Updated By: Ganapathi Sharma|

Updated on: Mar 06, 2024 | 9:34 AM

Share

ಬೆಂಗಳೂರು, ಮಾರ್ಚ್​ 6: ಅಂಬಾರಿ ಉತ್ಸವ ಬಸ್​ಗಳಿಗೆ (Ambari Utsav Bus) ಬಾಂಬ್ ಬೆದರಿಕೆ (Bomb Threat) ಬಂದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಅಧಿಕಾರಿಗಳು ಅಲರ್ಟ್​ ಆಗಿದ್ದಾರೆ. ಬಸ್​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ. ಬರುವ ಪ್ರಯಾಣಿಕರ ಚಲವಲನದ ಮೇಲೆ ಕಣ್ಣಿಡಲು ಸೂಚನೆ ನೀಡಲಾಗಿದೆ.

ರಾಜ್ಯಾದ್ಯಂತ ಒಟ್ಟು 20 ಅಂಬಾರಿ ಉತ್ಸವ ಬಸ್​​ಗಳು ಕಾರ್ಯಾಚರಿಸುತ್ತಿವೆ. ಈ ಪೈಕಿ, ಬೆಂಗಳೂರಿನಲ್ಲಿ 16 ಹಾಗೂ ಕುಂದಾಪುರ ಮತ್ತು ಮಂಗಳೂರಿನಲ್ಲಿ 4 ಬಸ್​​ಗಳಿವೆ. ಅಂಬಾರಿ ಉತ್ಸವ ಎಸಿ ಸ್ಲೀಪರ್ ಕೋಚ್ ಬಸ್​ಗಳಾಗಿದ್ದು, ಹೈದರಾಬಾದ್, ಚೆನ್ನೈ ಹಾಗೂ ಎರ್ನಾಕುಲಂಗೆ ಸಹ ಸಂಚರಿಸುತ್ತವೆ.

ಈ ಮಧ್ಯೆ, ಬೆಂಗಳೂರಿನಿಂದ ತೆರಳುವ ಅಂಬಾರಿ ಉತ್ಸವ ಬಸ್ಸೊಂದರ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್ ಮಾಡಿದೆ. ಇದೇ ವೇಳೆ, ಯಾರೂ ಭಯಪಡಬೇಡಿ, ನಾವು ನಿಮ್ಮನ್ನು ಸುರಕ್ಷಿತವಾಗಿ ಕರೆದೊಯ್ಯುತ್ತೇವೆ ಎಂದು ಪ್ರಯಾಣಕರಿಗೆ ಚಾಲಕ ಧೈರ್ಯ ಹೇಳಿದ್ದಾರೆ.

ಎಲ್ಲರ ಚಲನವಲನದ ಮೇಲೆ ಕಣ್ಣು ಇಡುತ್ತೇವೆ. ಅನುಮಾನ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುತ್ತೇವೆ ಎಂದು ಅಂಬಾರಿ ಸಿಬ್ಬಂದಿ ಪ್ರಯಾಣಿಕರಿಗೆ ಭರವಸೆ ನೀಡಿದ್ದಾರೆ.

ನಾವೆಲ್ಲ ಎಚ್ಚರಿಕೆಯಿಂದಿರಬೇಕು: ರಾಮಲಿಂಗಾ ರೆಡ್ಡಿ

ಈ ಮಧ್ಯೆ ಕೆಎಸ್​ಆರ್​ಟಿಸಿ ಬಸ್​ಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ರಾಯಚೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಈ ವಿಚಾರವಾಗಿ ನನಗೆ ಫೋನ್ ಬಂದಿತ್ತು. ಹೆಚ್ಚಿನ ಮಾಹಿತಿ ತಿಳಿದುಕೊಂಡು ಪ್ರತಿಕ್ರಿಯಿಸುತ್ತೇನೆ. ನಾವೂ ಸಹ ಕಟ್ಟೆಚ್ಚರಿಂದ ಇರಬೇಕಾಗುತ್ತದೆ. ನಾಲ್ಕು ಜನ ಎಂಡಿಗಳ ಜೊತೆ ಮಾತನಾಡುತ್ತೇನೆ. ಈ ವಿಚಾರದಲ್ಲಿ ಸ್ವಲ್ಪವೂ ಎಚ್ಚರ ತಪ್ಪುವ ಹಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ, ಗೃಹ ಸಚಿವ, ಡಿಸಿಎಂ ಸೇರಿ ಹಲವರಗೆ ಬಂತು ಬಾಂಬ್ ಬೆದರಿಕೆ ಸಂದೇಶ

ಬಸ್, ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆಯ ಸಂದೇಶವುಳ್ಳ ಇ-ಮೇಲ್ ಮಂಗಳವಾರ ಬಂದಿತ್ತು. ಸಿಎಂ, ಡಿಸಿಎಂ, ಗೃಹ ಸಚಿವರು ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆಯ ಸಂದೇಶವುಳ್ಳ ಇ-ಮೇಲ್ ಬಂದಿತ್ತು.

ಇದನ್ನೂ ಓದಿ: ಮಹಾ ಶಿವರಾತ್ರಿ: ಕೆಎಸ್ಆರ್​ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಬಸ್, ಇಲ್ಲಿದೆ ವಿವರ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಸಂದರ್ಭದಲ್ಲೇ ನಗರಕ್ಕೆ ಮತ್ತೊಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?