AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಕೆ.ಸುಧಾಕರ್​

ಮಧ್ಯರಾತ್ರಿ ವೇಳೆಗೆ ರೈತರು ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬರುತ್ತಾರೆ. ಹೀಗಾಗಿ ರಾತ್ರಿ ಕರ್ಫ್ಯೂ ರೈತರಿಗೆ ತೊಂದರೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಸಂಜೆ ಬಿಡುಗಡೆ ಆಗಲಿರುವ ಮಾರ್ಗಸೂಚಿಯಲ್ಲಿ ಪ್ರತಿಯೊಂದು ಅಂಶಗಳ ಬಗ್ಗೆ ಇರುತ್ತದೆ ಎಂದು ತಿಳಿಸಿದರು.

KSRTC ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಕೆ.ಸುಧಾಕರ್​
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 4:50 PM

Share

ಬೆಂಗಳೂರು: ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತೆ ರಾತ್ರಿ ಕರ್ಫ್ಯೂ ಮೊರೆ ಹೋಗಿದೆ. ಸಂಜೆ ವೇಳೆಗೆ ಸರ್ಕಾರ ಮಾರ್ಗ ಸೂಚಿ ಕೂಡ ಹೊರಡಿಸಲಿದೆ. ರಾತ್ರಿ ಕರ್ಫ್ಯೂವಿನಿಂದಾಗಿ ಬಸ್​ ಸಂಚಾರಕ್ಕೆ ತೊಂದರೆ ಆಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ. ಸುಧಾಕರ್​, ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾತನಾಡಿರುವ ಕೆ. ಸುಧಾಕರ್​, ಕೆಎಸ್​ಆರ್​ಟಿಸಿ ಬಸ್​ ಸಂಚಾರಕ್ಕೆ ಯಾವುದೇ ಅಡ್ಡಿ ಆಗುವುದಿಲ್ಲ. ಹೀಗಾಗಿ, ಬೇರೆಬೇರೆ ಊರುಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಗದು. ಎಲ್ಲರೂ ಮಲಗುವ ಸಂದರ್ಭದಲ್ಲಿ ನಾವು ಕರ್ಫ್ಯೂ ಮಾಡುತ್ತಿದ್ದೇವೆ. ಇದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ ಎಂದರು.

ಮಧ್ಯರಾತ್ರಿ ವೇಳೆಗೆ ರೈತರು ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬರುತ್ತಾರೆ. ಹೀಗಾಗಿ ರಾತ್ರಿ ಕರ್ಫ್ಯೂ ರೈತರಿಗೆ ತೊಂದರೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಸಂಜೆ ಬಿಡುಗಡೆ ಆಗಲಿರುವ ಮಾರ್ಗಸೂಚಿಯಲ್ಲಿ ಪ್ರತಿಯೊಂದು ಅಂಶಗಳೂ ಇರುತ್ತವೆ. ನಮ್ಮ ಸರ್ಕಾರದಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.

ಹೊಸ ವರ್ಷದ ಸಮೀಪದಲ್ಲೇ ಸರ್ಕಾರ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ. ಕೊರೊನಾ ಪ್ರಕರಣಗಳು ಹರಡುತ್ತಿರುವುದು ನಿಯಂತ್ರಣಕ್ಕೆ ಬರದ ಕಾರಣ ಇದು ಹೊಸ ವರ್ಷ ಆಚರಿಸುವ ಸಂದರ್ಭವಲ್ಲ ಎಂದು ಸುಧಾಕರ್​ ಅಭಿಪ್ರಾಯಪಟ್ಟಿದ್ದಾರೆ.

ಮುಂಗಡ ಟಿಕೆಟ್ ಕಾಯ್ದಿರಿಸಿರುವ ಎಲ್ಲ ಪ್ರಯಾಣಿಕರು ರಾತ್ರಿ 10 ಗಂಟೆಯ ಒಳಗೆ ನಿಲ್ದಾಣಗಳನ್ನು ತಲುಪಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಕರಿಗೆ ಮನವಿ ಮಾಡಿದ್ದರು.

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ