ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಮಾಸ್ಟರ್ ಸ್ಟ್ರೋಕ್, ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ಆದೇಶ
ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದು, ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ಕೊಟ್ಟಿದೆ.
ಬೆಂಗಳೂರು: ಸಾರಿಗೆ ನೌಕರರಿಗೆ (Transport Department employees) ಸರ್ಕಾರ ಶಾಕ್ ಕೊಟ್ಟಿದೆ. ಸಾರಿಗೆ ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ (Protest) ನಡೆಸದಂತೆ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. ಇದರೊಂದಿಗೆ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.
ಇದನ್ನೂ ಓದಿ: Namma Metro: ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಅವಧಿ ವಿಸ್ತರಿಸಿದ BMRCL
2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, ಕಾರ್ಯಗಾರ, ಕಚೇರಿ ಬಸ್ ನಿಲ್ದಾಣಗಳ ಸೂಚನ ಫಲಕಗಳಲ್ಲಿ ತಪ್ಪದೆ ಪ್ರಕಟಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಕಾರ್ಮಿಕ ಸಂಘಟನೆಗಳಿಗೂ ಪ್ರತಿ ತಲುಪಿಸುವಂತೆ ಸರ್ಕಾರ ಸೂಚಿಸಿದೆ.
ಚುನಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಸಾರಿಗೆ ನೌಕರರು ತಲೆ ಬಿಸಿಯಾಗಿದ್ದರು. ಆದ್ರೆ, ಇದೀಗ ಈ ಆದೇಶ ಹೊರಡಿಸುವ ಮೂಲಕ ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಕಾರ್ಮಿಕ ಇಲಾಖೆ ಹಾಗೂ ಕೆಎಸ್ಆರ್ಟಿಸಿ ಈ ರೀತಿ ಆದೇಶ ಹೊರಡಿಸುವ ಮೂಲಕ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕುವ ಯತ್ನ ಮಾಡಿದೆ ಆರೋಪ ಕೇಳಿಬಂದಿದೆ.
ಸಾರಿಗೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ. 19ರಿಂದ ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ 2 ವರ್ಷದಿಂದ ಹಲವು ಭಾರಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಸಾರಿಗೆ ನೌಕರರು ಸರ್ಕಾರವನ್ನು ಎಚ್ಚರಿಸಲು ಚಳಿಗಾಲ ವಿಧಾನಸಭೆ ಅಧಿವೇಶನ ಸಮಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ
ವಜಾಗೊಂಡ ನೌಕರರ ಮರು ನೇಮಕ, ವರ್ಗಾವಣೆಯಂತ ಶಿಕ್ಷೆ ರದ್ದು ಮಾಡಿ ಪೊಲೀಸ್ ಪ್ರಕರಣ ಹಿಂಪಡೆಯಬೇಕು. ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಡಬೇಕು. ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಂಡು ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವುದು ಸೇರಿದಂತೆ ಸರ್ಕಾರ ನೀಡಿರುವ ಲಿಖಿತ ಭರವಸೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಸಾರಿಗೆ ನೌಕರರ ಬೇಡಿಕೆಯಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 3:02 pm, Thu, 29 December 22