AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಸಾವಿರ ಬಸ್​ಗಳನ್ನು ರಸ್ತೆಗೆ ಇಳಿಸಲು ಕೆಎಸ್​ಆರ್​ಟಿಸಿ ಚಿಂತನೆ

ಶಕ್ತಿ ಯೋಜನೆ ಆರಂಭವಾದ ಬಳಿಕ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಕೆಲಸಕ್ಕೆ ಹೋಗುವ ಉದ್ಯೋಗಸ್ಥರಿಗೆ ಸರಿಯಾದ ಸಮಯಕ್ಕೆ ಬಸ್ ಸಿಗುತ್ತಿಲ್ಲ. ಸಾಕಷ್ಟು ಮಾರ್ಗದ ಬಸ್​​ಗಳನ್ನು ಮೊಟಕುಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಕೆಎಸ್​ಆರ್​ಟಿಸಿ ಅಂಬಾರಿ, ಐರಾವತ, ಪಲ್ಲಕ್ಕಿ ಸೇರಿದಂತೆ ಸಾವಿರ ಬಸ್​ಗಳನ್ನು ರೋಡಿಗಿಳಿಸಲು ಪ್ಲಾನ್ ಮಾಡುತ್ತಿದೆ.

ಹೊಸದಾಗಿ ಸಾವಿರ ಬಸ್​ಗಳನ್ನು ರಸ್ತೆಗೆ ಇಳಿಸಲು ಕೆಎಸ್​ಆರ್​ಟಿಸಿ ಚಿಂತನೆ
ಕೆಎಸ್​ಆರ್​ಟಿಸಿ
Kiran Surya
| Updated By: ವಿವೇಕ ಬಿರಾದಾರ|

Updated on:Jun 18, 2024 | 10:11 AM

Share

ಬೆಂಗಳೂರು, ಜೂನ್​ 18: ಶಕ್ತಿ ಯೋಜನೆ (Shakati Yojne) ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಂದ ಹೆಚ್ಚಿನ ಬಸ್​ಗಳ ನಿಯೋಜನೆಗೆ ಬೇಡಿಕೆ ಬಂದಿತ್ತು. ಇದರಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ. ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಕೆಎಸ್ಆರ್​​ಟಿಸಿ ಗುರುತಿಸಿದೆ. ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್ಆರ್​​ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ 500 ಬಸ್​ಗಳನ್ನು ನಿಯೋಜಿಸಲು ನಿರ್ಧಾರ ಮಾಡಲಾಗಿದೆ.

ನಮ್ಮ ಸರ್ಕಾರ ಹೊಸ ಬಸ್ ಖರೀದಿಗೆ ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ಒಂದು ಹೊಸ ಬಸ್ ಖರೀದಿ ಮಾಡಿರಲಿಲ್ಲ ಇದರಿಂದ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗಿತ್ತು. ವಿಭಾಗೀಯ ಮಟ್ಟದಲ್ಲಿ ಗುರುತಿಸಲಾಗಿರುವ ಹೊಸ ಮಾರ್ಗಗಳಲ್ಲಿ ಮುಂದಿನ 3 ತಿಂಗಳಲ್ಲಿ ಸೇವೆ ಆರಂಭ ಮಾಡಲಾಗುತ್ತದೆ. ಬಸ್​ ಸೇವೆ ಅವಶ್ಯಕತೆಯಿರುವ ಮಾರ್ಗಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.

ಕೆಎಸ್ಆರ್​​ಟಿಸಿ ವ್ಯಾಪ್ತಿಯಲ್ಲಿ ಬಸ್‌ಗಳ ಕೊರತೆ ನೀಗಿಸುವ ಸಲುವಾಗಿ ಹೊಸ ಬಸ್‌ ಖರೀದಿ ಮಾಡಲಾಗುತ್ತಿದೆ. ಸದ್ಯ 814 ಹೊಸ ಬಸ್​ಗಳ ಸೇರ್ಪಡೆ ಜತೆಗೆ 977 ಹಳೇ ಬಸ್‌ಗಳನ್ನು ಪುನಶ್ಚೇತನ ಮಾಡಲಾಗುತ್ತದೆ. 100 ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳ ಸೇರ್ಪಡೆಗೆ ಸರ್ಕಾರ ಅನುಮತಿ ನೀಡಿದ್ದು, 20 ಅಂಬಾರಿ, 20 ಐರಾವತ ಉತ್ಸವ ಬಸ್‌ಗಳ ಖರೀದಿಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ ಕೂಡ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ. ಸಾಮಾನ್ಯ ಸಾರಿಗೆ ಬಸ್‌ಗಳ ಜತೆಗೆ ಪ್ರೀಮಿಯಂ ಬಸ್‌ಗಳ ಸಂಖ್ಯೆಯನ್ನೂ ಹೆಚ್ಚಿಸಲು ನಿಗಮ ಯೋಜನೆ ಮಾಡಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಗೆ ಯುಪಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಭೇಟಿ, ಕರ್ನಾಟಕದ ಬಸ್​ ವ್ಯವಸ್ಥೆಗೆ ಫಿದಾ

ಈ ಬಗ್ಗೆ ಬಸ್ ಪ್ರಯಾಣಿಕ ವಿನಯ್ ಮಾತನಾಡಿ, ನಾವು ಸಾಕಷ್ಟು ಬಾರಿ ಹೊಸ ಬಸ್ ಖರೀದಿಗೆ ಮನವಿ ಮಾಡಿದ್ದೀವೆ. ಹೊಸ ಬಸ್ ಖರೀದಿಗೆ ಮುಂದಾಗಿರುವುದು ತುಂಬಾ ಸಂತೋಷ ಆಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತುಂಬಾ ಉಪಯೋಗ ಆಗುತ್ತದೆ ಎಂದರು.

ಒಟ್ಟಿನಲ್ಲಿ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ಸಿಗುತ್ತುಲ್ಲ ಎನ್ನುತ್ತಿದ್ದವರಿಗೆ ಹೊಸ ಬಸ್ ಆರಂಭ ಮಾಡುತ್ತಿರುವುದ ನಿಜಕ್ಕೂ ಸಂತೋಷದ ವಿಷಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:09 am, Tue, 18 June 24