ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಕೆಎಸ್ಆರ್ಟಿಸಿ
Shakti Scheme: ಶಕ್ತಿ ಯೋಜನೆ ಜಾರಿಗೆ ಬದ್ದಿದ್ದೇ ಬಂದಿದ್ದು ಮಹಿಳೆಯರು ಜಾಲಿ ಟ್ರಿಪ್ಗೆ ಹೋಗುತ್ತಿದ್ದಾರೆ. ಬಸ್ ತುಂಬೆಲ್ಲಾ ಇಂದಿಗೂ ಮಹಿಳೆಯರೇ ಜಾಸ್ತಿ ಪ್ರಯಾಣಿಸುತ್ತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತಗೊಳ್ಳಿಸಲಾಗುವುದು ಎಂದು ಊಹಾಪೋಹ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಕೆಎಸ್ಆರ್ಟಿಸಿ ಪ್ರಕಟಣೆ ಹೊರಡಿಸಿದ್ದು, ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದೆ.
ಬೆಂಗಳೂರು, ಆಗಸ್ಟ್ 16: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ ಎಂದ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಅಂತ್ಯದ ಬಳಿಕ ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಯೋಜನೆ ನಿಲ್ಲಿಸಲಾಗುತ್ತೆ ಎಂಬ ಊಹಾಪೋಹ ಹಬ್ಬಿಸುತ್ತಿದ್ದಾರೆ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕಸ್ತೂರಿ ರಂಗನ್ ಬಗ್ಗೆ ವಿರೋಧವೋ, ಎನ್ಇಪಿ ಬಗ್ಗೆ ವಿರೋಧವೋ; ಕರ್ನಾಟಕ ಸರ್ಕಾರಕ್ಕೆ ಸಿಟಿ ರವಿ ಪ್ರಶ್ನೆ
ಇನ್ನು 10 ವರ್ಷಗಳ ಕಾಲ ಶಕ್ತಿ ಯೋಜನೆ ಮುಂದುವರಿಯುತ್ತದೆ. ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ. ರಾಜ್ಯದಲ್ಲಿ ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಶಕ್ತಿಯೋಜನೆ ಮುಂದುವರಿಯುತ್ತೆ ಎಂದು ತಿಳಿಸಿದರು.
ಬೆಂಗಳೂರು ಟ್ರಾಫಿಕ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ
ಬೆಂಗಳೂರು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ, ಕುಡಿಯುವ ನೀರಿನ ಬಗ್ಗೆ, ಡ್ರಗ್ಸ್ ನಿಯಂತ್ರಣದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದರು.
ಇದನ್ನೂ ಓದಿ: ಸತ್ಯವನ್ನು ಮುಚ್ಚಿಡಲು ಚಲುವರಾಯಸ್ವಾಮಿ ಮಾಟ, ಮಂತ್ರ ಮಾಡಿಸುತ್ತಾನೆ: ಸುರೇಶ್ ಗೌಡ
ಡಿಸೆಂಬರ್ನಲ್ಲಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಯಬಹುದು. ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಕಾಮಗಾರಿ ಬಗ್ಗೆ ತಿಳಿಯಲು ಈಗಾಗಲೇ ಎಸ್ಐಟಿ ತನಿಖೆ ಆಗುತ್ತಿದೆ. ಬಾಕಿ ಬಿಲ್ ಬಿಡುಗಡೆ ಸಂಬಂಧ 1 ತಿಂಗಳು ಸಮಯ ಕೊಟ್ಟಿದ್ದಾರೆ. ಯಾರು ಕೆಲಸ ಚೆನ್ನಾಗಿ ಮಾಡಿದ್ದಾರೆ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.