Bus Fare Hike: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ರಾಜ್ಯ ರಸ್ತೆ ಸಾರಿಗೆ ನಿಗಮಗಳು ಮುಂದಾಗಿವೆ. ಕೆಎಸ್ಆರ್​ಟಿಸಿ ಮತ್ತು ಇತರ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳ ಪ್ರಸ್ತಾಪವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. ಟಿಕೆಟ್ ದರ ಎಷ್ಟು ಹೆಚ್ಚಾಗಬಹುದು? ವಿವರಗಳಿಗೆ ಮುಂದೆ ಓದಿ.

Bus Fare Hike: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ
ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ದರ ಹೆಚ್ಚಳ ಸಾಧ್ಯತೆ
Follow us
|

Updated on: Jun 08, 2024 | 4:21 PM

ಬೆಂಗಳೂರು, ಜೂನ್ 8: ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳ ಟಿಕೆಟ್ ದರ (Bus Ticket Fare) ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಡೀಸೆಲ್, ಬಿಡಿಭಾಗಗಳು ಮತ್ತು ಇತರ ಬಿಡಿಭಾಗಗಳ ಬೆಲೆ ಏರಿಕೆಯಾಗಿದೆ. ಜತೆಗೆ, ನೌಕರರ ವೇತನವೂ ಹೆಚ್ಚಾಗಿದೆ. ಹೀಗಾಗಿ ಬಸ್‌ಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ರಾಜ್ಯ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆ (Shakti Scheme) ಜಾರಿಯಾದ ನಂತರ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನವೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಈ ಹಿಂದೆ, 2020 ರಲ್ಲಿ ಸಾರಿಗೆ ನಿಗಮದ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿತ್ತು. 2020 ರಲ್ಲಿ ಲೀಟರ್‌ ಡೀಸೆಲ್​​​ಗೆ 61 ರೂ. ಇತ್ತು, ಆದರೆ ಈಗ ಅದು 90 ರೂ.ಗೆ ಏರಿದೆ. ಸುಮಾರು ಶೇ 50 ರಷ್ಟು ಹೆಚ್ಚಳವಾಗಿದೆ.

ಟಿಕೆಟ್ ದರ ಶೇ 25-30ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ನಿಗಮದ ಅಧಿಕಾರಿಯೊಬ್ಬರು ಖಚಿತಪಡಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಟಿಕೆಟ್ ದರವನ್ನು ಹೆಚ್ಚಿಸುವಂತೆ ನಾವು ರಾಜ್ಯ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದೇವೆ. ನಮ್ಮ ಗಳಿಕೆಯ ಶೇಕಡಾ 45 ಕ್ಕಿಂತ ಹೆಚ್ಚು ಡೀಸೆಲ್‌ಗೆ ಹೋಗುತ್ತದೆ. ಡೀಸೆಲ್ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಮೊದಲು ದಿನಕ್ಕೆ 3 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೆವು. ಆದರೆ ಈಗ 5 ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕವಾಗಿ ಹೆದ್ದಾರಿ ಟೋಲ್‌ಗಳನ್ನು ಹೇಗೆ ಹೆಚ್ಚಿಸುತ್ತದೆಯೋ ಹಾಗೆಯೇ ಬಸ್ ನಿಗಮಗಳು ಸಹ ಒಂದು ಸೂತ್ರವನ್ನು ಹೊಂದಿವೆ. ಶೇ 20ರಷ್ಟು ಏರಿಕೆಯಾಗಿರುವ ವೇತನ, ಶೇ 46ರಷ್ಟು ಏರಿಕೆಯಾಗಿರುವ ಡೀಸೆಲ್ ಬೆಲೆ ಮತ್ತು ಬಿಡಿಭಾಗಗಳು ಮತ್ತು ಇತರ ಬೆಲೆಗಳನ್ನು ಪರಿಗಣಿಸಿದರೆ, ಟಿಕೆಟ್ ದರವನ್ನು ಸುಮಾರು ಶೇ 40ರಷ್ಟು ಹೆಚ್ಚಿಸಬೇಕಾಗುತ್ತದೆ. ಆದರೆ ನಮ್ಮದು ಸರ್ಕಾರಿ ಬಸ್ ನಿಗಮವಾಗಿದೆ. ನಮ್ಮ ಆದ್ಯತೆ ಲಾಭ ಗಳಿಸುವುದಲ್ಲ, ಜನರ ಸೇವೆ. ಟಿಕೆಟ್ ದರವನ್ನು ಗಣನೀಯವಾಗಿ ಹೆಚ್ಚಿಸಲು ನಾವು ಬಯಸುವುದಿಲ್ಲ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಈ ವರ್ಷ ಸರ್ಕಾರ ನಮ್ಮ ಪ್ರಸ್ತಾವನೆಯನ್ನು ಅನುಮೋದಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಬಜೆಟ್‌ನಲ್ಲಿ ಹೊಸ ಬಸ್‌ಗಳನ್ನು ಖರೀದಿಸಲು, ನೌಕರರಿಗೆ ವೇತನವನ್ನು ತೆರವುಗೊಳಿಸಲು, ಕಟ್ಟಡಗಳಿಗೆ ಮತ್ತು ಇತರರಿಗೆ ವಿಶೇಷ ಅನುದಾನವನ್ನು ನಾವು ಪಡೆಯುತ್ತೇವೆ. ಆದರೆ ಶಕ್ತಿ ಯೋಜನೆಯ ನಂತರ, ಸರ್ಕಾರವು ಯಾವುದೇ ಅನುದಾನವನ್ನು ನೀಡುತ್ತಿಲ್ಲ ಮತ್ತು ನಮ್ಮ ಆದಾಯದಿಂದಲೇ ನಿಗಮಗಳನ್ನು ನಡೆಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಎಷ್ಟು ಹೆಚ್ಚಾಗಬಹುದು ಟಿಕೆಟ್ ದರ?

ಶೇಕಡಾ 25-30 ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರವು ಶೇ 15-20 ರ ಹೆಚ್ಚಳಕ್ಕೆ ಅನುಮತಿ ನೀಡಬಹುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟಿಕೆಟ್ ದರ ಹೆಚ್ಚಳದ ಬಗ್ಗೆ ಖಚಿತಪಡಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಇನ್ನೂ ಪ್ರಸ್ತಾವನೆಯನ್ನು ಸ್ವೀಕರಿಸಿಲ್ಲ. ಅವರು ಅದನ್ನು ಶೀಘ್ರದಲ್ಲೇ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!