ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ!

ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಮೈಸೂರು ಮಾತ್ರವಲ್ಲ, ಶ್ರೀರಂಗಪಟ್ಟಣ, ಮಂಗಳೂರು, ರಾಯಚೂರು, ಚಿಕ್ಕಮಗಳೂರು ಹೀಗೆ ಹಲವು ಕಡೆಗಳಲ್ಲಿ ನಾಡಹಬ್ಬವನ್ನ ಆಚರಣೆ ಮಾಡಲಾಗ್ತಿದೆ. ಇನ್ನೂ ಈ ದಸರಾ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ತೆರಳುತ್ತಾರೆ. ಹೀಗಾಗಿ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಸಿ ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಿದೆ.

ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ!
ಕೆಎಸ್​​ಆರ್​ಟಿಸಿ ಬಸ್
Follow us
ರಮೇಶ್ ಬಿ. ಜವಳಗೇರಾ
|

Updated on: Oct 05, 2024 | 10:55 AM

ಬೆಂಗಳೂರು, (ಅಕ್ಟೋಬರ್ 05): ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.  ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.

09/10/2024 ರಿಂದ 12/10/2024ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಈ ಬಸ್‌ಗಳು ಹೊರಡಲಿವೆ. ನಂತರ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಂದ ವಾಪಸ್​ ಬೆಂಗಳೂರಿಗೆ ಬರಲು 13/10/2024ರಿಂದ 14/10/2024ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Namma Metro: ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಕಾದಿದೆ ಟಿಕೆಟ್ ದರ ಏರಿಕೆಯ ಶಾಕ್..!

ಈ ವಿಶೇಷ ಬಸ್​ಗಳು ಎಲ್ಲೆಲ್ಲಿಗೆ?

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ಈ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿಗೆ ಪ್ರತ್ಯೇಕ ವಿಶೇಷ ಬಸ್

ಇನ್ನುಮೈಸೂರು ದಸರಾ ನೋಡಲು ಹೋಗುವವರೆಗೂ ಸಹ ಹೆಚ್ಚುವರಿ ಬಸ್​ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್. ಡಿ ಕೋಟೆ, ಚಾಮರಾಜನಗರ, ಹುಣಸೂರು. ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಪ್ಲೈ ಬಸ್ (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ನಿಗಮ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್