AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಯಲ್ಲಿ ಸೋರಿಕೆ ತಡೆಗಟ್ಟಲು ಇಸ್ರೋ ತಂತ್ರಜ್ಞಾನ ಬಳಕೆ ಪ್ರಸ್ತಾವನೆ!

ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಕುರಿತು ಇಂದು ಬೆಂಗಳೂರಿನ ಇಸ್ರೋ ಹೆಡ್ ಕ್ವಾರ್ಟರ್ಸ್ ನಲ್ಲಿ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಇಸ್ರೋದ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು. ಇಸ್ರೋ ತಂತ್ರಜ್ಞಾನವನ್ನು ಪಡೆದು ಪ್ರಮುಖವಾಗಿ ಸಾರಿಗೆ ಇಲಾಖೆ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಃಶ್ಚೇತನಗೊಳಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆ.ಎಸ್.ಆರ್. ಟಿ. ಸಿ, ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿ.ಎಂ.ಟಿ.ಸಿ ಮುಂತಾದ […]

KSRTC ಯಲ್ಲಿ ಸೋರಿಕೆ ತಡೆಗಟ್ಟಲು ಇಸ್ರೋ ತಂತ್ರಜ್ಞಾನ ಬಳಕೆ ಪ್ರಸ್ತಾವನೆ!
ಸಾಧು ಶ್ರೀನಾಥ್​
|

Updated on: Apr 29, 2020 | 4:16 PM

Share

ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಕುರಿತು ಇಂದು ಬೆಂಗಳೂರಿನ ಇಸ್ರೋ ಹೆಡ್ ಕ್ವಾರ್ಟರ್ಸ್ ನಲ್ಲಿ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಇಸ್ರೋದ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.

ಇಸ್ರೋ ತಂತ್ರಜ್ಞಾನವನ್ನು ಪಡೆದು ಪ್ರಮುಖವಾಗಿ ಸಾರಿಗೆ ಇಲಾಖೆ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಃಶ್ಚೇತನಗೊಳಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆ.ಎಸ್.ಆರ್. ಟಿ. ಸಿ, ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿ.ಎಂ.ಟಿ.ಸಿ ಮುಂತಾದ ಸಂಸ್ಥೆಗಳ ವೆಚ್ಚಗಳನ್ನು ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯವಾದ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಇಸ್ರೋದ ಮುಖ್ಯಸ್ಥರಲ್ಲಿ ಡಿಸಿಎಂ ಸವದಿ ಮನವಿ ಮಾಡಿಕೊಂಡರು.

ಸಾರಿಗೆ ಸಂಸ್ಥೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಒದಗಿಸಲು ಮತ್ತು ಸೋರಿಕೆ ತಡೆಗಟ್ಟಲು ಇಸ್ರೋದಿಂದ ಮಾರ್ಗದರ್ಶನ ಒದಗಿಸಿಕೊಡಬೇಕೆಂದು ಉಪಮುಖ್ಯಮಂತ್ರಿ ಮನವಿ ಮಾಡಿದರು.

ಕೊರೋನಾ ಪಿಡುಗಿನಿಂದಾಗಿ ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕಮಟ್ಟ ತೀವ್ರವಾಗಿ ಕುಸಿದಿದೆ. ಇದರಿಂದ ಚೇತರಿಸಿಕೊಳ್ಳಲು ಬಾಹ್ಯಾಕಾಶ ತಂತ್ರಜ್ಞಾನ ಬಳಸಿಕೊಳ್ಳುವ ಸಾಧ್ಯಾಸಾಧ್ಯತೆ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಉಪಮುಖ್ಯಮಂತ್ರಿ ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೋ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು. ಇಸ್ರೋದ ಸೈಂಟಿಫಿಕ್ ಸೆಕ್ರೆಟರಿ ಡಾ. ಉಮಾ ಮಹೇಶ್ವರನ್ ಹಾಗೂ ಇಸ್ರೋದ ಅಂತರಿಕ್ಷ್ ಎಂ.ಡಿ. ರಾಕೇಶ್ ಶಶಿಭೂಷಣ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ