ಹಬ್ಬಕ್ಕೆ ಸಿಹಿಸುದ್ದಿ: KSRTCಯಿಂದ ಹೆಚ್ಚುವರಿ ಸಾವಿರ ಬಸ್, ಭಾರೀ ದರ ಕಡಿತವೂ ಉಂಟು!
ದೀಪಾವಳಿ ಹಬ್ಬಕ್ಕೆ KSRTCಯಿಂದ ಭರ್ಜರಿ ಗಿಫ್ಟ್ ಘೋಷಣೆಯಾಗಿದ್ದು, ಹೆಚ್ಚುವರಿಯಾಗಿ ಸಾವಿರ ಬಸ್ಗಳನ್ನು ಬಿಡಲು ತೀರ್ಮಾನ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಹಾಗೂ ವೀಕೆಂಡ್ನಲ್ಲಿ ಕೆಎಸ್ಆರ್ಟಿಸಿ 20% ದರವನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳುತಿತ್ತು. ಆದರೆ ಈ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುವರಿ ಹಣ ಪಡೆಯುವುದನ್ನು ನಿಲ್ಲಿಸಿದೆ. ಜೊತೆಗೆ ನಾರ್ಮಲ್ ದಿನಗಳಲ್ಲಿ ಕೆಎಸ್ಆರ್ಟಿಸಿಯಲ್ಲಿದ್ದ ದರವನ್ನು ನೀಡಿ ಪ್ರಯಾಣಿಕರು ಪ್ರಯಾಣ ಮಾಡಬಹುದು ಎಂದಿದೆ. ಒಂದು ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ.. 13-11-2020 ಹಾಗೂ 14-11-2020 ರಂದು ಬೆಂಗಳೂರಿನಿಂದ ಹೆಚ್ಚುವರಿಯಾಗಿ ಸಾವಿರ ಬಸ್ಗಳ ವ್ಯವಸ್ಥೆ […]

ದೀಪಾವಳಿ ಹಬ್ಬಕ್ಕೆ KSRTCಯಿಂದ ಭರ್ಜರಿ ಗಿಫ್ಟ್ ಘೋಷಣೆಯಾಗಿದ್ದು, ಹೆಚ್ಚುವರಿಯಾಗಿ ಸಾವಿರ ಬಸ್ಗಳನ್ನು ಬಿಡಲು ತೀರ್ಮಾನ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಹಾಗೂ ವೀಕೆಂಡ್ನಲ್ಲಿ ಕೆಎಸ್ಆರ್ಟಿಸಿ 20% ದರವನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳುತಿತ್ತು. ಆದರೆ ಈ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುವರಿ ಹಣ ಪಡೆಯುವುದನ್ನು ನಿಲ್ಲಿಸಿದೆ. ಜೊತೆಗೆ ನಾರ್ಮಲ್ ದಿನಗಳಲ್ಲಿ ಕೆಎಸ್ಆರ್ಟಿಸಿಯಲ್ಲಿದ್ದ ದರವನ್ನು ನೀಡಿ ಪ್ರಯಾಣಿಕರು ಪ್ರಯಾಣ ಮಾಡಬಹುದು ಎಂದಿದೆ.
ಒಂದು ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ.. 13-11-2020 ಹಾಗೂ 14-11-2020 ರಂದು ಬೆಂಗಳೂರಿನಿಂದ ಹೆಚ್ಚುವರಿಯಾಗಿ ಸಾವಿರ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ.. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ.. ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ
ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ.. ಆಂಧ್ರಪ್ರದೇಶ/ತೆಲಂಗಾಣ ಹಾಗೂ ಕೇರಳ ರಾಜ್ಯದ ವಿವಿಧ ಸ್ಥಳಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.