AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ರಾಜ್ಯದ 5 ನಗರಗಳಿಗೆ ಇ-ಬಸ್​ ಸಂಪರ್ಕ, ಯಾವ್ಯಾವ ಊರುಗಳು, ಈ ಸ್ಟೋರಿ ಓದಿ

ಮುಂಬರುವ ದಿನಗಳಲ್ಲಿ ಕೆಎಸ್​ಆರ್​ಟಿಸಿಯ ಎಲೆಕ್ಟ್ರಿಕ್​ ಬಸ್​ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ.

ಶೀಘ್ರದಲ್ಲೇ ರಾಜ್ಯದ 5 ನಗರಗಳಿಗೆ ಇ-ಬಸ್​ ಸಂಪರ್ಕ, ಯಾವ್ಯಾವ ಊರುಗಳು, ಈ ಸ್ಟೋರಿ ಓದಿ
ಕೆಎಸ್​ಆರ್​ಟಿಸಿ ಇ-ಬಸ್​
ವಿವೇಕ ಬಿರಾದಾರ
|

Updated on:Mar 20, 2023 | 11:30 AM

Share

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮೊದಲ ಹಂತದಲ್ಲಿ ಎಲೆಕ್ಟ್ರಿಕ್​ ಬಸ್ (E-Bus) ​ಗಳನ್ನು ಬೆಂಗಳೂರು-ಮೈಸೂರು ಮಧ್ಯೆ ಪ್ರಾರಂಭಿಸಿತ್ತು. ಮುಂಬರುವ ದಿನಗಳಲ್ಲಿ ಈ ಎಲೆಕ್ಟ್ರಿಕ್​ ಬಸ್​ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ. ಕೇಂದ್ರ ಸರ್ಕಾರದ ಫೇಮ್-2 (FAME- Faster Adoption and Manufacturing of Electric Vehicles) ಯೋಜನೆಯಡಿ, ಕೆಎಸ್​ಆರ್​ಟಿಸಿಯ 50 ಎಸಿ ಇ-ಬಸ್​ಗಳನ್ನು ಖಾಸಗಿ ಸಂಸ್ಥೆಗಳಿಗೆ ಬಾಡಿಗೆಗೆ ನೀಡಿದೆ. ಈ ಹೊಸ ಬಸ್‌ಗಳಿಗೆ ‘EV ಪವರ್ ಪ್ಲಸ್’ ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರು-ಮೈಸೂರು ನಡುವೆ ಪರಿಚಯಿಸಲಾದ ಸೇವೆಗೆ ಉತ್ತಮ ಪ್ರೋತ್ಸಾಹ ಸಿಕ್ಕಿದೆ. ಹೊಸ ಮಾರ್ಗಗಳಲ್ಲಿಯೂ ಹೆಚ್ಚಿನ ಪ್ರೋತ್ಸಾಹ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಕೆಎಸ್‌ಆರ್‌ಟಿಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು-ಮೈಸೂರು ಕೆಎಸ್​ಆರ್​ಟಿಸಿ ಎಲೆಕ್ಟ್ರಿಕ್​ ಬಸ್​

2023ರ ಜನವರಿ 16 ರಿಂದ ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​ ಬಸ್​ಗಳು ಬೆಂಗಳೂರು-ಮೈಸೂರು ಸಂಚಾರ ಪ್ರಾರಂಭಿಸಿದ್ದವು. ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪಿತ್ತು. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿದೆ.

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗಿದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸುತ್ತಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Mon, 20 March 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್