ಕೆಎಸ್ಆರ್ಟಿಸಿ ʻಧ್ವನಿ ಸ್ಪಂದನʼ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ
ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಕೆಎಸ್ಆರ್ಟಿಸಿಗೆ Excellence in Urban Transport ಪ್ರಶಸ್ತಿ ಲಭಿಸಿದೆ. ಮೈಸೂರು ನಗರ ಸಾರಿಗೆಯ ಧ್ವನಿ ಸ್ಪಂದನ ಉಪಕ್ರಮಕ್ಕೆ ಈ ರಾಷ್ಟ್ರೀಯ ಗೌರವ ಸಂದಿದೆ. ದೃಷ್ಟಿ ವಿಕಲಚೇತನ ಪ್ರಯಾಣಿಕರಿಗೆ ಬಸ್ ಗುರುತಿಸಲು ಮತ್ತು ಸುರಕ್ಷಿತವಾಗಿ ಸಂಚರಿಸಲು ಈ ಯೋಜನೆ ಸಹಕಾರಿಯಾಗಿದೆ.

ಬೆಂಗಳೂರು, ನವೆಂಬರ್ 9: ದೃಷ್ಟಿ ಇಲ್ಲದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯ (KSRTC) ಮೈಸೂರು ನಗರ ಸಾರಿಗೆಯ 200 ಬಸ್ಗಳಲ್ಲಿ ಜಾರಿಗೆ ತಂದಿರುವ ‘ಧ್ವನಿ ಸ್ಪಂದನ-ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಯೋಜನೆಗೆ ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು Award of Excellence in Urban Transport ರಾಷ್ಟ್ರೀಯ ಪ್ರಶಸ್ತಿ ನೀಡಿದೆ.
‘ಕಳೆದ ವರ್ಷದಲ್ಲಿ ಅತ್ಯುತ್ತಮ ನಗರ ಸಾರಿಗೆ ಯೋಜನೆಗಳನ್ನು ಜಾರಿಗೆ ತಂದ ರಾಜ್ಯ’ ಎಂಬ ವರ್ಗದಲ್ಲಿ ಕೆಎಸ್ಆರ್ಟಿಸಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ.
ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ-ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದೆ. ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.
ಇದನ್ನೂ ಓದಿ: 3 ಸಾವಿರ ಕೋಟಿ ರೂ. ಪಿಎಫ್ ಬಾಕಿ ಉಳಿಸಿಕೊಂಡ ಕೆಎಸ್ಆರ್ಟಿಸಿ, ಬಿಎಂಟಿಸಿ: ಪಿಎಫ್ ಸಿಗದೆ ಸಂಕಷ್ಟದಲ್ಲಿ ಸಾರಿಗೆ ನೌಕರರು
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಹಾಗೂ ವಸತಿ ಮತ್ತು ನಗರಾಭಿವೃದ್ಧಿ ಖಾತೆಯ ರಾಜ್ಯ ಸಚಿವ ತೋಕನ್ ಸಾಹು ಅವರು ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಧ್ವನಿ ಸ್ಪಂದನ-ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವಾಗಿದೆ. ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ದೃಷ್ಟಿವಿಕಲ ಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
400ಕ್ಕೂ ಹೆಚ್ಚು ದೃಷ್ಟಿ ವಿಕಲ ಚೇತನರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ. ಸರ್ಕಾರ, ಶಿಕ್ಷಣ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿದೆ ಜಾರಿಗೆ ತಂದಿರುವ ದೇಶದ ಮಾದರಿ ಉಪಕ್ರಮವಾಗಿದೆ ಎಂಬ ಹೆಗ್ಗಳಿಕೆ ಪಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:34 pm, Mon, 10 November 25




