ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ
ತಿರುಪತಿ ದೇವಾಲಯ
Follow us
TV9 Web
| Updated By: ಆಯೇಷಾ ಬಾನು

Updated on: Jun 29, 2021 | 1:24 PM

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ನ್ನು ಪುನಾರಂಭಗೊಳಿಸಿದೆ. ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ ವಾರದ ಏಳು ದಿನ ಕೂಡ ಪ್ರವಾಸಿಗರಿಗೆ ಸೇವೆ ನೀಡಲಿದೆ.

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಸುರಕ್ಷಾ/ಮುಂಜಾಗೃತ ಕ್ರಮಗಳು -ಪ್ರವಾಸಗಳಿಗೆ ನಿಯೋಜಿಸಲಾಗಿರುವ ವಾಹನಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಲಾಗುವುದು. -ಸಿಬ್ಬಂದಿಗಳಿಗೆ ಹಾಗೂ ಪ್ರವಾಸಿಗರಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. -ಪ್ರವಾಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. -ಪ್ರವಾಸಿಗರಿಗೆ ಆಸನಗಳನ್ನು ಸಾಮಾಜಿಕ ಅಂತರದೊಂದಿಗೆ ಕಾಯ್ದಿರಿಸಲಾಗುವುದು.

ಈ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ಬುಕ್ಕಿಂಗ್ : www.kstdc.co ಭೇಟಿ ನೀಡಬಹುದು. ಹಾಗೂ 080-4334 4334/35, 91 8970650070/ 91 8970650075 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ತಿರುಪತಿ ದೇವಸ್ಥಾನದ ಬಳಿ ಭಿಕ್ಷುಕನ ಕೊಠಡಿಯಲ್ಲಿ ಸಿಕ್ಕಿದ್ದೇನು ಗೊತ್ತಾ!?

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್