AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2Aಗೆ ಸೇರಿಸದಿದ್ದರೆ ಪಾದಯಾತ್ರೆ ನಡೆಸುತ್ತೇವೆ: ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ

ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಿದ್ದರೆ ಜನವರಿ 14ರಿಂದ ಪಾದಯಾತ್ರೆ ನಡೆಸುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.

2Aಗೆ ಸೇರಿಸದಿದ್ದರೆ ಪಾದಯಾತ್ರೆ ನಡೆಸುತ್ತೇವೆ: ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
guruganesh bhat
| Edited By: |

Updated on:Jan 05, 2021 | 8:02 PM

Share

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕುರಿತು ಜ.14ರೊಳಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರಕ್ಕೆ ಮುಜುಗರವಾಗುವಂತೆ ಪಾದಯಾತ್ರೆ ನಡೆಸುತ್ತೇವೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.

ಈ ಹಿಂದೆಯೇ ಬೇಡಿಕೆ ಈಡೇರಿಕೆಗಾಗಿ ಪಾದಯಾತ್ರೆಗೆ ಮುಂದಾಗಿದ್ದೇವು. ಆದರೆ, ಆಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಭರವಸೆ ನೀಡಿದ ಕಾರಣ ಪಾದಯಾತ್ರೆಯನ್ನು ಮುಂದೂಡಿದ್ದೆವು. ಆದರೆ ಈಗ ಅವರು ನೀಡಿದ ಗಡುವು ಮುಗಿದಿದ್ದು, ಪಾದಯಾತ್ರೆ ನಡೆಸುತ್ತೇವೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ತಿಳಿಸಿದ್ದಾರೆ.

ಜನವರಿ 9 ರಂದು ಸಚಿವ ಸಿ.ಸಿ.ಪಾಟೀಲ್ ಸರ್ಕಾರದ ಪ್ರತಿನಿಧಿಯಾಗಿ ನಿಯೋಗದೊಂದಿಗೆ ಕೂಡಲ ಸಂಗಮಕ್ಕೆ ಬರುತ್ತಿದ್ದಾರೆ. ಆದರೂ ಪಾದಯಾತ್ರೆ ಸಂಬಂಧ ಈಗಾಗಲೇ ಜಿಲ್ಲಾವಾರು ಪ್ರವಾಸ ಕೈಗೊಳ್ಳುತ್ತಿದ್ದೇವೆ. ಜನವರಿ 14 ರಿಂದ ಕೂಡಲ ಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪನವರು ತಮ್ಮ ಪರಮಾಧಿಕಾರ ಬಳಸಿ‌ ಪಂಚಮಸಾಲಿ ಸಮಾಜವನ್ನು 2A ಗೆ ಸೇರಿಸಬೇಕು.ಇಲ್ಲದಿದ್ದರೆ ಎಲ್ಲ ಲಿಂಗಾಯಿತ ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಶಿಫಾರಸು ಮಾಡಬೇಕು. ಪಾದಯಾತ್ರೆ ಸಂದರ್ಭದಲ್ಲಿ ಸಮಾಜದ ಯುವಕರು ಹೋರಾಟ ನಡೆಸಲಿದ್ದು, ಸರ್ಕಾರಕ್ಕೆ ಮುಜುಗರವಾಗುವುದು ಖಚಿತ. ಜನವರಿ 14 ರ ಮೊದಲು ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಅವರು ತಿಳಿಸಿದ್ದಾರೆ.

ಎದೆಯ ಮೇಲೆ ರಾಜಕಾರಣಿಯ ಟ್ಯಾಟೂ ಹಾಕಿಸಿಕೊಂಡ ವಿಜಯಪುರ ಅಭಿಮಾನಿ!

Published On - 7:56 pm, Tue, 5 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!