AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.17ರಿಂದ ಡಿ.20 ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರಿಗೆ ನಿಷೇಧ

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಡಿಸೆಂಬರ್ 17ರಿಂದ ನಾಲ್ಕು ದಿನ‌ ಭಕ್ತಾದಿಗಳಿಗೆ ದೇವಾಲಯ ಪ್ರವೇಶ ನಿಷೇಧ ಹೇರಲಾಗಿದೆ.

ಡಿ.17ರಿಂದ ಡಿ.20 ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರಿಗೆ ನಿಷೇಧ
ಟಿಕೆಟ್​ಗಾಗಿ.. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎದುರು ಕಂಡುಬಂದ ಸರತಿಸಾಲು
ಆಯೇಷಾ ಬಾನು
|

Updated on: Dec 15, 2020 | 8:28 AM

Share

ಮಂಗಳೂರು: ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಡಿಸೆಂಬರ್ 17ರಿಂದ ನಾಲ್ಕು ದಿನ‌ ಭಕ್ತಾದಿಗಳಿಗೆ ದೇವಾಲಯ ಪ್ರವೇಶ ನಿಷೇಧ ಹೇರಲಾಗಿದೆ.

ಕೊರೊನಾ ಎರಡನೇ ಅಲೆ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡವಾಗಿ ನೋಂದಾಯಿಸಿಕೊಂಡಿರುವ ಭಕ್ತರನ್ನು ಹೊರಡು ಪಡಿಸಿ, ಮಹೋತ್ಸವ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ಶ್ರೀ ದೇವಳಕ್ಕೆ ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.12ರಿಂದ ಡಿ.26ರ ವರೆಗೆ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಕೋವಿಡ್‌ 19 ಹಿನ್ನಲೆಯಲ್ಲಿ ಕೋವಿಡ್‌ ಮಾರ್ಗಸೂಚಿಯಂತೆ ಸರಳವಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ.

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂತು ಭಕ್ತಸಾಗರ: ಟಿಕೆಟ್ ಪಡೆಯಲು ಜನರ ಪರದಾಟ