AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ

ಸರ್ಕಾರವು ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರಗಳನ್ನು ರಚಿಸಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ಮೂಲಸೌಕರ್ಯ ವೃದ್ಧಿ, ಭಕ್ತರ ಸೌಲಭ್ಯ ಸುಧಾರಣೆ, ಪರಿಸರ ಸಂರಕ್ಷಣೆ ಮತ್ತು ಪಾರದರ್ಶಕ ಆಡಳಿತವನ್ನು ಖಚಿತಪಡಿಸುತ್ತವೆ. ಇದು ಕರಾವಳಿ ಭಾಗದ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ. ರಸ್ತೆಗಳು, ವಸತಿ ಮತ್ತು ದಾಸೋಹ ಭವನಗಳ ಆಧುನೀಕರಣದಿಂದ ಲಕ್ಷಾಂತರ ಭಕ್ತರಿಗೆ ಉತ್ತಮ ಅನುಭವ ಸಿಗಲಿದೆ.

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 06, 2026 | 11:04 AM

Share

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ.

ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು:

ಸಮಗ್ರ ಅಭಿವೃದ್ಧಿ: ದೇವಾಲಯದ ಸುತ್ತಮುತ್ತಲಿನ ರಸ್ತೆಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು.

ಭಕ್ತರ ಸೌಲಭ್ಯ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಭಕ್ತರ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು, ಸರತಿ ಸಾಲಿನ ವ್ಯವಸ್ಥೆ ಮತ್ತು ದಾಸೋಹ ಭವನಗಳ ಆಧುನೀಕರಣ.

ಪರಿಸರ ಸಂರಕ್ಷಣೆ: ಕುಕ್ಕೆ ಸುಬ್ರಹ್ಮಣ್ಯವು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿದೆ. ಪ್ರಾಧಿಕಾರ ರಚನೆಯಿಂದ ಇಲ್ಲಿನ ಪರಿಸರ ಸಮತೋಲನ ಕಾಪಾಡುತ್ತಾ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ.

ಆಡಳಿತಾತ್ಮಕ ಪಾರದರ್ಶಕತೆ: ದೇವಾಲಯದ ಆದಾಯವನ್ನು ಸಮರ್ಪಕವಾಗಿ ಆಯಾ ಕ್ಷೇತ್ರಗಳ ಅಭಿವೃದ್ಧಿಗೇ ಬಳಸಲು ಈ ಸ್ವಾಯತ್ತ ಪ್ರಾಧಿಕಾರಗಳು ನೆರವಾಗಲಿವೆ.

ಇದನ್ನೂ ಓದಿ: Karnataka Budget 2026 LIVE: 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್: ಸಿದ್ದರಾಮಯ್ಯ

ಈ ಘೋಷಣೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ದೊಡ್ಡ ಬಲ ನೀಡಲಿದೆ. ಹಂಪಿ ಅಥವಾ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರಗಳ ಮಾದರಿಯಲ್ಲಿಯೇ ಇವು ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಬಜೆಟ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?