AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷ ಇದ್ದದ್ದು ನನ್ನ ಮೇಲೆ, ಬಡವರ ಮೇಲೇಕೆ ಕೋಪ ಎಂದು ಬಿಎಸ್​ವೈ ವಿರುದ್ಧ ಹೆಚ್​ಡಿಕೆ ಟೀಕಾಸ್ತ್ರ

ಬೆಂಗಳೂರು: ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿರುವ ಬಗ್ಗೆ ಸಿಎಂ ಬಿಎಸ್​ ಯಡಿಯೂರಪ್ಪರನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ನೀವು ಭಾಷಣ ಮಾಡಿದ್ರಿ, ಆದ್ರೆ ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಸೇಡಿನ ರಾಜಕೀಯ ಮಾಡಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಕುಮಾರಸ್ವಾಮಿ ಟ್ವಿಟ್ಟರ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಡವರ ಬಂಧು ಕಾರ್ಯಕ್ರಮವನ್ನು […]

ದ್ವೇಷ ಇದ್ದದ್ದು ನನ್ನ ಮೇಲೆ, ಬಡವರ ಮೇಲೇಕೆ ಕೋಪ ಎಂದು ಬಿಎಸ್​ವೈ ವಿರುದ್ಧ ಹೆಚ್​ಡಿಕೆ ಟೀಕಾಸ್ತ್ರ
ಸಾಧು ಶ್ರೀನಾಥ್​
|

Updated on: Sep 20, 2019 | 1:59 PM

Share

ಬೆಂಗಳೂರು: ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿರುವ ಬಗ್ಗೆ ಸಿಎಂ ಬಿಎಸ್​ ಯಡಿಯೂರಪ್ಪರನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ನೀವು ಭಾಷಣ ಮಾಡಿದ್ರಿ, ಆದ್ರೆ ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಸೇಡಿನ ರಾಜಕೀಯ ಮಾಡಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಕುಮಾರಸ್ವಾಮಿ ಟ್ವಿಟ್ಟರ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬಡವರ ಬಂಧು ಕಾರ್ಯಕ್ರಮವನ್ನು ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷ ವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಜಾರಿಗೆ ತರಲಾಗಿತ್ತು. ಅಶಕ್ತರು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

‘ಬಡವರ ಬಂಧು’ ಯೋಜನೆಯಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಆದ್ದರಿಂದ ಈ ಯೋಜನೆ ವಿಫಲವಾಗಬಾರದು. ಈ ಕಾರ್ಯಕ್ರಮಕ್ಕೆ ನೀವು ಚೈತನ್ಯ ತುಂಬಬೇಕು, ಇಲ್ಲವೇ ಹೋರಾಟ ಎದುರಿಸಬೇಕು ಎಂದು ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ