AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Jul 06, 2021 | 10:47 PM

Share

ಮಡಿಕೇರಿ: ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟದ ಜಟಾಪಟಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರದ ಎಪಿಎಂಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ತಾಲೂಕು ರಚನಾ ಹೋರಾಟಗಾರರನ್ನು ಕಡೆಗಣಿಸಿರುವ ಆರೋಪದ ಮೇಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ‘ಕೈ’ ಕಾರ್ಯಕರ್ತರ ಪ್ರತಿಭಟನೆ ನಡೆದಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಮ್ಮುಖದಲ್ಲೇ ಜಟಾಪಟಿಯಾಗಿದೆ.

ಕುಶಾಲನಗರ ತಾಲೂಕು ಉದ್ಘಾಟಿಸಿದ ಸಚಿವ ಆರ್.ಅಶೋಕ್​ಗೆ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದ್ದಾರೆ. ಜಟಾಪಟಿ ವೇಳೆ ಮೂಕ ಪ್ರೇಕ್ಷಕರಾದ ಸಚಿವ ಆರ್.ಅಶೋಕ್, ಕಾರ್ಯಕ್ರಮದ ವೇದಿಕೆಯಲ್ಲಿ ಸುಮ್ಮನೆ ನಿಲ್ಲುವಂತಾಗಿದೆ.

ಕೊಡಗಿನಲ್ಲಿ ನೂತನ‌ ಕುಶಾಲನಗರ ತಾಲ್ಲೂಕು ಉದ್ಘಾಟನೆ ಆಗಿದೆ. ಕಂದಾಯ ಸಚಿವ ಆರ್. ಅಶೋಕ್ ಹೊಸ ತಾಲ್ಲೂಕು ಉದ್ಘಾಟಿಸಿದ್ದಾರೆ. ಕುಶಾಲನಗರ ಎಪಿಎಂಸಿ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಈ ಮೊದಲು ಸೋಮವಾರಪೇಟೆ ತಾಲ್ಲೂಕಿನ ಭಾಗವಾಗಿದ್ದ ಕುಶಾಲನಗರ, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಿದೆ.

ಕೆಆರ್​ಎಸ್ ಡ್ಯಾಂ ಬಿರುಕು ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಆರ್. ಅಶೋಕ್ ಮಾತನಾಡಿದ್ದಾರೆ. ವೈಜ್ಞಾನಿಕ ಆಧಾರವಿಲ್ಲದೇ ಯಾರೂ ಮಾತನಾಡಬಾರದು. ಕೆಆರ್​ಎಸ್​ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಈ ಕುರಿತು ಇಂಜಿನಿಯರ್​ಗಳೇ ವರದಿಯನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ.

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಮೇಕೆದಾಟು ಯೋಜನೆ ಮಾಡಲು ನಿರ್ಧರಿಸಿ ಆಗಿದೆ; ಯಾರನ್ನೋ ಕೇಳಿ ಮಸಾಲೆ ಅರೆಯೋಕಾಗಲ್ಲ: ಆರ್. ಅಶೋಕ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್