ಸಿಎಂ ಭೇಟಿ ಮಾಡಿದ ಕೆಯುಡಬ್ಲೂೃಜೆ, ಪತ್ರಕರ್ತರ ಬೇಡಿಕೆ ಈಡೇರಿಸುವಂತೆ ಸಿದ್ದರಾಮಯ್ಯಗೆ ಮನವಿ
ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಬೆಂಗಳೂರು, ಜೂನ್ 27: ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಅರ್ಜಿ ಸಲ್ಲಿಸಿದ್ದರೂ, ಅರ್ಹ ಪತ್ರಕರ್ತರ ಮಾಸಾಶನ ಮಂಜೂರು ಮಾಡಿಲ್ಲ. 3-4 ತಿಂಗಳಾದರೂ ಪತ್ರಕರ್ತರ ಮಾಸಾಶನ ಇನ್ನೂ ಬಿಡುಗಡೆ ಆಗಿಲ್ಲ ಎಂಬಿತ್ಯಾಧಿ ಬೇಡಿಕೆಗಳ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ.
ಹಿಂದುಳಿದ ವರ್ಗ, ಬ್ರಾಹ್ಮಣ ಮತ್ತು ದಲಿತ ವರ್ಗಗಳಿಗೆ ಬಿಡುಗಡೆ ಮಾಡಬೇಕಾದ ಜಾಹೀರಾತುಗಳ ಬಗ್ಗೆ ಸಿಎಂ ಗಮನ ಸೆಳೆಯಲಾಯಿತು. ಮಾಧ್ಯಮ ಅಕಾಡೆಮಿ, ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಜುಲೈ 1 ರಂದು ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಆಯೋಜಿಸಿರುವ ಪತ್ರಿಕಾ ದಿನಾಚರಣೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ರಾಜ್ಯ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು ಮತ್ತಿತರರು ಹಾಜರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ