ಕೆಯುಡಬ್ಲ್ಯೂಜೆ ಸಂವಾದ: ಮೌಢ್ಯ ಮತ್ತು ಮೂಢನಂಬಿಕೆಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ವತಿಯಿಂದ ಬೆಂಗಳೂರಿನಲ್ಲಿ ‘ಮೌಢ್ಯ-ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂವಾದಲ್ಲಿ ಭಾಗವಹಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮೌಢ್ಯ ಮತ್ತು ಮೂಢನಂಬಿಕೆ ಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಹೇಳಿದ್ದಾರೆ.

ಕೆಯುಡಬ್ಲ್ಯೂಜೆ ಸಂವಾದ: ಮೌಢ್ಯ ಮತ್ತು ಮೂಢನಂಬಿಕೆಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಸತೀಶ್ ಜಾರಕಿಹೊಳಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Mar 04, 2024 | 8:22 PM

ಬೆಂಗಳೂರು, ಮಾರ್ಚ್​ 4: ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (kuwj) ಹಮ್ಮಿಕೊಂಡಿದ್ದ ‘ಮೌಢ್ಯ-ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ವಿಚಾರಧಾರೆಗಳ ಅಧ್ಯಯನ ಮೂಲಕ ವೈಚಾರಿಕತೆ ಬೆಳೆಸಿಕೊಂಡವರ ಮೇಲೆ ಯಾರೂ ಸವಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಸರ್ಕಾರ ಯಾವುದೇ ಕಾನೂನು ರೂಪಿಸಿದರು ಅದನ್ನು ಅನುಷ್ಠಾನಕ್ಕೆ ತರುವುದು ಕಾರ್ಯಾಂಗ. ಮೂಢನಂಬಿಕೆಗಳನ್ನು ತಡೆಯಲು ಹೊಸ ಕಾನೂನು ರೂಪಿಸುವ ಅಗತ್ಯವಿಲ್ಲ. ಇದು ಮುಖ್ಯಮಂತ್ರಿಯೊಬ್ಬರಿಂದ ಆಗುವಂತದ್ದಲ್ಲ ಎಂದು ಹೇಳಿದ್ದಾರೆ.

ಶಾಸಕರು, ಸಚಿವರು ಸೇರಿದಂತೆ ಎಲ್ಲರು ಇಚ್ಛಾಶಕ್ತಿಯಿಂದ ಕೈಜೋಡಿಸಿದರೆ, ಎಲ್ಲವೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತದೆ. ಆದರೆ, ಅಂಥಹ ವಾತಾವರಣ ಇನ್ನೂ ನಮ್ಮಲ್ಲಿ ನಿರ್ಮಾಣವಾಗಿಲ್ಲ. ಅಂಬೇಡ್ಕರ್, ಬುದ್ಧ, ಬಸವಣ್ಣ ಅವರ ವಿಚಾರಧಾರೆಗಳು ನಮಗೆ ಬೆಳಕಾಗಬೇಕು. ಆ ಆದರ್ಶದ ಬೆಳಕಿನಲ್ಲಿ ಉತ್ತಮ ಸಮಾಜ ನಿರ್ಮಾಣ ಕಟ್ಟುವುದು ನಮ್ಮ ಕನಸಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮವು ಸಕ್ರಿಯವಾಗಿ ಕೈ ಜೋಡಿಸಿದರೆ ಸಮಾಜವನ್ನು ಮೌಢ್ಯ ಮುಕ್ತ ಮಾಡಲು ಸುಲಭ ಸಾಧ್ಯ ಎಂದು ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ದಾವಣಗೆರೆ ಸಮ್ಮೇಳನ ಯಶಸ್ವಿಗೆ ಸಾಂಘಿಕ ಪ್ರಯತ್ನ ಕಾರಣ: ಸರ್ವರಿಗೂ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಮೌಢ್ಯವನ್ನು ತೊಲಗಿಸಲು ಮಾಧ್ಯಮದ ಪಾತ್ರ ಬಹುಮುಖ್ಯ. ಮೌಢ್ಯ, ಮೂಢನಂಬಿಕೆಯನ್ನು ದೂರ ಮಾಡಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ

ನಾನು ಹಲವಾರು ಕೆಲಸಗಳನ್ನು ಸ್ಮಶಾನದಿಂದಲೇ ಪ್ರಾರಂಭಿಸಿದ್ದೇನೆ. ಸ್ಮಶಾನ ಎನ್ನುವುದು ಭಯ ಹುಟ್ಟಿಸುತ್ತದೆ ಎನ್ನುವುದು ಅವರವರ ನಂಬಿಕೆ. ಅಲ್ಲಿ ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ. ಎಲ್ಲವೂ ನಮ್ಮ ಮನೋ ಕಲ್ಪನೆ. ಒಳ್ಳೆಯ ಕೆಲಸ ಮಾಡಬೇಕು ಎನ್ನುವ ಇಚ್ಛಾಶಕ್ತಿ ಇದ್ದರೆ ಅದಕ್ಕೆ ಜಾಗ, ಘಳಿಗೆ ಮುಖ್ಯವಾಗುವುದಿಲ್ಲ ಎಂದಿದ್ದಾರೆ.

ಸಾವಿರ ಕೋಟಿ ರೂ. ಬಿಡುಗಡೆ: 1500 ನೇಮಕ

ಲೋಕೋಪಯೋಗಿ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದ್ದು, ಪಾರದರ್ಶಕತೆಗೆ ಆದ್ಯತೆ ನೀಡಲಾಗಿದೆ. ಬಾಕಿ ಇದ್ದ 1 ಸಾವಿರ ಕೋಟಿ ರೂ. ಬಿಲ್ ಬಿಡುಗಡೆ ಮಾಡಲಾಗಿದೆ. ಪ್ರತಿ 20 ಕಿ.ಮೀ.ಗೆ ಒಬ್ಬರಂತೆ ಒಟ್ಟು 1500 ಜನರನ್ನು ರಸ್ತೆ ನಿರ್ವಹಣೆ ನೋಡಿಕೊಳ್ಳಲು ನೇಮಕ ಮಾಡಿಕೊಳ್ಳಲಾಗುವುದು. ಇಂಜಿನೀಯರ್‌ಗಳಿಗೆ ತರಬೇತಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಎಲ್ಲರಿಗಿಂತಲೂ ವಿಭಿನ್ನ ರಾಜಕಾರಿಣಿ: ಶಿವಾನಂದ ತಗಡೂರು

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಮೂಡನಂಬಿಕೆಯ ವಿರುದ್ಧ ಸದಾ ಧ್ವನಿ ಎತ್ತುತ್ತಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಡೆ ನಿಜಕ್ಕೂ ಶ್ಲಾಘನೀಯ. ಎಲ್ಲರಿಗಿಂತಲೂ ವಿಭಿನ್ನ ರಾಜಕಾರಿಣಿ ಆಗಿದ್ದರೂ, ಈತನಕ ತಾವು ನಂಬಿದ ನೆಲೆಯಲ್ಲಿಯೇ ಹೆಜ್ಜೆ ಇಡುತ್ತಿರುವುದು ವಿಶೇಷವಾದದ್ದು ಎಂದರು.

ಕೆಯುಡಬ್ಲ್ಯೂಜೆ ಭವನಕ್ಕೆ ನೆರವು

ಬೆಂಗಳೂರಿನಲ್ಲಿ ಕೆಯುಡಬ್ಲ್ಯೂಜೆ ನಿರ್ಮಾಣ ಮಾಡಲಿರುವ ಪತ್ರರ್ಕರ ಭವನಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ನೆರವು ನೀಡಲಾಗುವುದು. ಈಗಿರುವ ಕಚೇರಿ ಮತ್ತು ಸಭಾಂಗಣ ನವೀಕರಣ ಮಾಡಲು ಕೂಡಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಭರವಸೆ ನೀಡಿದರು.

ಶ್ರದ್ದಾಂಜಲಿ

ನಮ್ಮನ್ನಗಲಿದ ಹಿರಿಯ ಪತ್ರಕರ್ತರಾದ ಬಾಗಲಕೋಟೆಯ ರಾಮಮನಗೂಳಿ, ಮಂಗಳೂರಿನ ವಿ.ಮನೋಹರ ಪ್ರಸಾದ್, ಗದಗದ ದಿಲೀಪಕುಮಾರ ಜೋಷಿ, ಪತ್ರಿಕಾ ವಿತರಕರ ವಿಭಾಗದ ಕೊಪ್ಪಳದ ಮಂಜುನಾಥ ದಂಡಿನ ಅವರಿಗೆ ಸಭೆಗೂ ಮುನ್ನ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕೊಚ್ಚಿನ್ ಕನ್ನಡ ಸಂಘದ ಅಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಘಟಕದ ಪದಾಧಿಕಾರಿಗಳಾದ ನರೇಂದ್ರ ಪಾರೆಕಟ್, ಕೆ.ಎಂ. ಜಿಕ್ರಿಯಾ, ಶಿವರಾಜ್, ಕೆ.ವಿ. ಪರಮೇಶ್, ಕೆ.ಎಸ್.ಸ್ವಾಮಿ, ಬೀದರ್ ಘಟಕದ ಜಿಲ್ಲಾಧ್ಯಕ್ಷ ಡಿ.ಕೆ.ಗಣಪತಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಅಪ್ಪುರಾವ್ ಸೌದಿ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶಿನಿ ಗೌಡ ಮತ್ತಿತರರು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:54 pm, Mon, 4 March 24

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ